ದಾಂಡೇಲಿ : ಏ. ೧೪ ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಯ ನಿಮಿತ್ತ ನಗರಸಭೆಯ ಸಭಾಭವನದಲ್ಲಿ ಪೂರ್ವಭಾವಿ ಸಭೆಯು ನಗರಸಭೆಯ ಅಧ್ಯಕ್ಷರಾದ ಅಷ್ಪಾಕ್ ಶೇಖ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.
ನಗರಸಭೆಯ ಆವರಣದಲ್ಲಿ ಅಂಬೇಡ್ಕರ್ ಮೂರ್ತಿ ಪ್ರತಿಷ್ಟಾಪನೆಯಾಗಿ ಒಂದು ವರ್ಷ ಆಗಿರುವ ಹಿನ್ನಲೆಯಲ್ಲಿ ಈ ವರ್ಷವಿಜೃಂಭಣೆಯಿಂದ ಅಂಬೇಡ್ಕರ್ ಜಯಂತಿಯನ್ನು ಆಚರಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಅಂಬೇಡ್ಕರ್ ಮೂರ್ತಿ ಪ್ರತಿಷ್ಟಾಪನಾ ಸಮಿತಿಯ ನೇತೃತ್ವದಲ್ಲಿ ಕೆ.ಸಿ.ವೃತ್ತದಿಂದ ನಗರಸಭೆಯ ಆವರಣದಲ್ಲಿರುವ ಅಂಬೇಡ್ಕರ್ ಮೂರ್ತಿ ಸ್ಥಳದವರೆಗೆ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯ ನಂತರದಲ್ಲಿ ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಹಾಗೂ ವಿಶೇಷ ಗೌರವಾರ್ಪಣೆಯನ್ನು ಸಲ್ಲಿಸಿ ವೇದಿಕೆ ಕಾರ್ಯಕ್ರಮವನ್ನು ನಗರಸಭೆಯ ಆವರಣದಲ್ಲಿ ಆಯೋಜಿಸುವ ಬಗ್ಗೆ ಚರ್ಚಿಸಲಾಯಿತು. ಇಷ್ಟು ವರ್ಷಗಳವರೆಗೆ ಅಂಬೇಡ್ಕರ್ ಭವನದಲ್ಲಿ ನಡೆಯುತ್ತಿದ್ದ ಸಭಾ ಕಾರ್ಯಕ್ರಮವನ್ನು ಈ ಬಾರಿ ನಗರಸಭೆಯ ಆವರಣದಲ್ಲಿಯೇ ಹಮ್ಮಿಕೊಳ್ಳುವ ಬಗ್ಗೆ ನಿರ್ಧರಿಸಲಾಯಿತು.
ಅಂಬೇಡ್ಕರ್ ಜಯಂತಿಯನ್ನು ತಾಲೂಕಾಡಳಿತ ಮತ್ತು ನಗರಾಡಳಿತ ಹಾಗೂ ನಗರದ ಸಂಘ ಸಂಸ್ಥೆಗಳ ಸಹಕಾರದಲ್ಲಿ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಸರ್ವರು ಸಹಕರಿಸಬೇಕೆಂದು ನಗರ ಸಭೆಯ ಅಧ್ಯಕ್ಷರಾದ ಅಷ್ಪಾಕ್ ಶೇಖ್ ಕರೆ ನೀಡಿದರು.
ಸಭೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆಯ ರೂಪುರೇಷೆಗಳ ಬಗ್ಗೆ ನಗರ ಸಭೆಯ ಸದಸ್ಯರು, ದಲಿತ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮತ್ತು ಪ್ರಮುಖರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಸಭೆಯಲ್ಲಿ ನಗರಸಭೆಯ ಉಪಾಧ್ಯಕ್ಷೆ ಶಿಲ್ಪಾ ಕೋಡೆ, ಸ್ಥಾಯಿ ಸಮಿತಿ ಅಧ್ಯಕ್ಷೆ ಸುಧಾ ರಾಮಲಿಂಗ ಜಾಧವ, ನಗರಸಭೆಯ ಸದಸ್ಯರುಗಳಾದ ಸರಸ್ವತಿ ರಜಪೂತ್, ಸಂಜಯ ನಂದ್ಯಾಳ್ಕರ, ಮೌಲಾಲಿ ಮುಲ್ಲಾ, ಮೋಹನ ಹಲವಾಯಿ, ಬುದವಂತಗೌಡ ಪಾಟೀಲ್, ಅನಿಲ್ ನಾಯ್ಕರ್, ಮಜೀದ್ ಸನದಿ, ವಿಜಯ ಕೊಲೇಕರ, ವೆಂಕಟ್ರಮಣಮ್ಮ ಮೈಥುಕುರಿ, ರುಕ್ಮಿಣಿ ಬಾಗಾಡೆ, ಶಾಹಿದಾ ಪಠಾಣ್, ಪ್ರೀತಿ ನಾಯರ್, ಸಪೂರ ಯರಗಟ್ಟಿ, ಸುಗಂಧ ಕಾಂಬಳೆ ಹಾಗೂ ತಹಶೀಲ್ದಾರ್ ಕಚೇರಿಯ ಶಿರೆಸ್ತದಾರ್ ಸುರೇಶ ಅಡವಿ ಹಾಗೂ ವಿವಿಧ ದಲಿತಪರ ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ನಗರಸಭೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಪೌರಾಯುಕ್ತ ವಿವೇಕ ಬನ್ನೆ ಸ್ವಾಗತಿಸಿ, ವಂದಿಸಿದರು.