Slide
Slide
Slide
previous arrow
next arrow

ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು ತಾಳ್ಮೆಯಿಂದ ಕಾರ್ಯ ನಿರ್ವಹಿಸಿ: ಕರೀಂ ಅಸಾದಿ

300x250 AD

ಕಾರವಾರ: ಸಂಜೀವಿನಿ ಒಕ್ಕೂಟದಡಿ ಕಾರ್ಯ ನಿರ್ವಹಿಸುತ್ತಿರುವ ಪ್ರತಿಯೊಂದು ಸಿಬ್ಬಂದಿಗಳು ತುಂಬಾ ಆತ್ಮೀಯತೆ ಹಾಗೂ ಪ್ರೀತಿಯಿಂದ ಯಾವುದೇ ತಕರಾರುಗಳಿಲ್ಲದೆ ತಾಳ್ಮೆಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕ ಕರೀಂ ಅಸಾದಿ ಸೂಚನೆ ನೀಡಿದರು.

ಅವರು ಸೋಮವಾರ ಶಿರಸಿ ತಾಲೂಕಿನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಸಂಜೀವಿನಿ ಒಕ್ಕೂಟದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಎನ್.ಆರ್.ಎಲ್.ಎಂ. ದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಯಾವುದೇ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಒತ್ತಡ ಹೇರುವುದಾಗಲಿ, ಅಥವಾ ಕಿರುಕುಳವಾಗದಂತೆ ನೋಡಿಕೊಳ್ಳಬೇಕು ಎಂದ ಅವರು ನರೇಗಾ ಯೋಜನೆಯ ಕಾಮಗಾರಿಗಳ ಕುರಿತು ಮಾಹಿತಿಯನ್ನು ನಿಮ್ಮ ಸುತ್ತಲಿನ ಜನರಿಗೂ ತಿಳಿಸುವುದರ ಜೊತೆಗೆ ಕಾಮಗಾರಿ ಪಡೆದುಕೊಳ್ಳುವಂತೆ ಉತ್ತೇಜಿಸುವುದು. ಸರ್ಕಾರದ ಪ್ರತಿಯೊಂದು ಯೋಜನೆಗಳ ಸದುಪಯೋಗವನ್ನು ಪಡಿಸಿಕೊಳ್ಳಲು ಜಾಗೃತಿ ಮೂಡಿಸಬೇಕು ಎಂದರು.
ಸಭೆಯ ಪೂರ್ವದಲ್ಲಿ ಹುತ್ತಗಾರ ಗ್ರಾಮ ಪಂಚಾಯತ್‌ನ ಗಣೇಶ ನಗರದಲ್ಲಿ ನರೇಗಾ ಯೋಜನೆಯಡಿ ನಿರ್ಮಾಣವಾದ ಮಳೆನೀರಿನ ಕೊಯ್ಲು ಕಾಮಗಾರಿ ಪರಿಶೀಲನೆ ನಡೆಸಿದರು. ಹಾಗೂ ತಾಲೂಕು ಪಂಚಾಯತ್ ಕಚೇರಿ ಭೇಟಿ ನಡೆಸಿ ನರೇಗಾ ಪ್ರಗತಿ ಕುರಿತು ಪರಿಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ನರೇಗಾ ಸಹಾಯಕ ನಿರ್ದೇಶಕ ಚನ್ನಬಸಪ್ಪ ಹಾವಣಗಿ, ತಾಲೂಕು ಪಂಚಾಯತ್ ಸಿಬ್ಬಂದಿಗಳು, ಎನ್.ಆರ್.ಎಲ್.ಎಂ ಸಿಬ್ಬಂದಿಗಳು ಇದ್ದರು.

300x250 AD
Share This
300x250 AD
300x250 AD
300x250 AD
Back to top