ದಾಂಡೇಲಿ : ನಗರಸಭೆಯ ವಾರ್ಡ್ ನಂ:2ರಲ್ಲಿ ಅಗತ್ಯವಾಗಿ ಆಗಬೇಕಾಗಿದ್ದ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲು ವಿಳಂಬ ಮಾಡುತ್ತಿರುವುದರಿಂದ ತೀವ್ರ ತೊಂದರೆಯಾಗಿದೆ. ಈ ನಿಟ್ಟಿನಲ್ಲಿ ವಾರ್ಡಿನ ಅಭಿವೃದ್ಧಿಗೆ ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ನಗರಸಭೆ ವಾರ್ಡ್ ನಂ: 02ರ ಸದಸ್ಯ ಬುಧವಂತ ಗೌಡ ಪಾಟೀಲ್ ಅವರು ನಗರಸಭೆ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆಯನ್ನು ನಡೆಸಿದ್ದಾರೆ.
ಕೂಡಲೇ ಅನುದಾನ ಬಿಡುಗಡೆ ಮಾಡದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ.