ಬನವಾಸಿ: ವೃದ್ಧೆಯ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬನವಾಸಿ ಠಾಣೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಚೇತನ ಪರಶುರಾಮ ಗಾಯಕವಾಡ ಹಾಗೂ ಅರ್ಜುನ ಶ್ರೀರಾಮ ಶಿಂದೆ ಬಂಧಿತ ಆರೋಪಿಗಳು.
ಆರೋಪಿಗಳು ಏ.4 ರಂದು ಬನವಾಸಿಯ ಶೈಲಾ ಆನಂದ ಮಂಗಳೂರು ಎಂಬುವವರ ಮಾಂಗಲ್ಯ ಸರವನ್ನು ಕಿತ್ತು ಪರಾರಿಯಾಗಿದ್ದರು. ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಬನವಾಸಿ ಠಾಣೆ ಪೊಲೀಸರು ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಲಾದ ಕಾರು ಹಾಗೂ ಮಾಂಗಲ್ಯ ಸರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಡಿವೈಎಸ್ಪಿ ಗಣೇಶ ಕೆಎಲ್ ಮಾರ್ಗದರ್ಶನದಲ್ಲಿ ಸಿಪಿಐ ಶಶಿಕಾಂತ ವರ್ಮಾ ನೇತೃತ್ವದಲ್ಲಿ ಬನವಾಸಿ ಠಾಣೆ ಪಿಎಸ್ಐಗಳಾದ ಚಂದ್ರಕಲಾ ಪತ್ತಾರ್, ಸುನೀಲ್ ಕುಮಾರ್ ಬಿ.ವೈ ಹಾಗೂ ಸಿಬ್ಬಂದಿಗಳಾದ ಚಂದ್ರಪ್ಪ ಕೊರವರ, ಪ್ರಶಾಂತ ಪಾವಸ್ಕರ್, ಬಸವರಾಜ ಜಾಡರ, ಮಂಜುನಾಥ ನಡುವಿನಮನಿ, ಮಂಜಪ್ಪ ಪಿ, ಮಹದೇವ ನಿರೋಳ್ಳಿ, ರಾಜು ಸಾಲಗಾಂವಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.