Slide
Slide
Slide
previous arrow
next arrow

ಜಲ ಸಂರಕ್ಷಣೆಯಿಂದ ಮಾತ್ರ ನೀರಿನ ಅಭಾವ ತಡೆಯಲು ಸಾಧ್ಯ: ಮಲ್ಲಿಕಾ ಶೆಟ್ಟಿ

300x250 AD

ಬನವಾಸಿ: ಜಲ ಸಂರಕ್ಷಣೆಯಿಂದ ಮಾತ್ರ ನೀರಿನ ಅಭಾವವನ್ನು ತಡೆಗಟ್ಟಬಹುದು ಎಂದು ಮಹಿಳಾ ಜ್ಞಾನವಿಕಾಸ ಕೇಂದ್ರದ ತಾಲ್ಲೂಕು ಸಮನ್ವಯಾಧಿಕಾರಿ ಮಲ್ಲಿಕಾ ಶೆಟ್ಟಿ ಹೇಳಿದರು.

ಅವರು ಕೊರ್ಲಕಟ್ಟಾ ಗ್ರಾಮದಲ್ಲಿ ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮಹಾಸತಿ ಮಹಿಳಾ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಹಮ್ಮಿಕೊಂಡ ಜಲ ಸಂರಕ್ಷಣಾ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನಮಗೆ ಲಭ್ಯವಿರುವ ನೀರನ್ನು ಜಾಗರೂಕತೆಯಿಂದ ಮತ್ತು ಮಿತವ್ಯಯದಿಂದ ಬಳಸಿ,ಮುಂದಿನ ಪೀಳಿಗೆಗೆ ನೀರನ್ನು ಉಳಿಸುವುದೇ ನೀರಿನ ಸಂರಕ್ಷಣೆಯಾಗಿದೆ. ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಜೀವ ಸಂಕುಲದ ಉಗಮ, ಅಸ್ತಿತ್ವ ಮತ್ತು ಬೆಳವಣಿಗೆಗೆ ಕಾರಣವಾಗಿರುವ ನೀರನ್ನು ಸಮರ್ಪಕವಾಗಿ ನಿರ್ವಹಿಸುವುದರ ಮೂಲಕ ನೀರನ್ನು ಸಂರಕ್ಷಿಸಬಹುದಾಗಿದೆ. ನಾವು ಅವಶ್ಯಕತೆಗೆ ಅನುಗುಣವಾಗಿ ನೀರಿನ ಬಳಕೆ ಮಾಡಬೇಕು. ಮಳೆಗಾಲದಲ್ಲಿ ಮಳೆ ನೀರು ಹರಿದು ಹೋಗದಂತೆ ತಡೆಯೊಡ್ಡಿ ಭೂಮಿಯಲ್ಲಿ ಇಂಗುವಂತೆ ಮಾಡುವುದರಿಂದ ಅಂತರ್ಜಲ ಮಟ್ಟವನ್ನು ಹೆಚ್ಚು ಮಾಡುವ ಕಾರ್ಯ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಮಹಾಸತಿ ಜ್ಞಾನ ವಿಕಾಸ ಕೇಂದ್ರದ ಸರ್ವ ಸದಸ್ಯರು ಇದ್ದರು.

300x250 AD
Share This
300x250 AD
300x250 AD
300x250 AD
Back to top