ಸಿದ್ದಾಪುರ: ಸಿದ್ದಾಪುರ ತಾಲೂಕು ಬಿಜೆಪಿ ಘಟಕದಿಂದ ಪಟ್ಟಣದ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ,ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ಹಾಗೂ ಶೋಷಿತರ ಅನುದಾನ ದುರ್ಬಳಕೆ ಖಂಡಿಸಿ ಬುಧವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ತಿಮ್ಮಪ್ಪ ಎಂ.ಕೆ, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿನಾಯ್ಕ ಹಣಜೀಬೈಲ್, ಎಸ್.ಕೆ.ಮೇಸ್ತಾ, ತೋಟಪ್ಪ ನಾಯ್ಕ, ಗುರುರಾಜ ಶಾನಭಾಗ, ನಂದನ ಬೋರ್ಕರ್, ವಿನಯ ಹೊನ್ನೆಗುಂಡಿ, ಕೃಷ್ಣಮೂರ್ತಿ ಮಡಿವಾಳ,ಸುಮನಾ ಕಾಮತ್, ಮಾದೇವಿ ಗೌಡ,ವಿನಾಯಕ ಕೆ.ಆರ್, ಜಿಪಂ ಮಾಜಿ ಸದಸ್ಯ ಎಂ.ಜಿ.ಹೆಗಡೆ ಗೆಜ್ಜೆ, ಅನಂತ ಹೆಗಡೆ, ಆದರ್ಶ ಪೈ ಬಿಳಗಿ, ಗಣೇಶ ನಾಯ್ಕ, ಕೃಷ್ಣಮೂರ್ತಿ ನಾಯ್ಕ ಐಸೂರು, ದಿನೇಶ ಹೆಗಡೆ ಇತರರು ಪಾಲ್ಗೊಂಡಿದ್ದರು.