Slide
Slide
Slide
previous arrow
next arrow

ಕರಾವಳಿ ಉತ್ಸವಕ್ಕೆ ಭರದ ಸಿದ್ದತೆ ; ವಿವಿಧ ಸಮಿತಿಗಳ ರಚನೆ

300x250 AD

ಕಾರವಾರ: ಕಾರವಾರದ ರವೀಂದ್ರನಾಥ್ ಟಾಗೂರ್ ಕಡಲತೀರದಲ್ಲಿ ಮೇ.4 ರಿಂದ 5 ದಿನಗಳ ಕಾಲ ಅದ್ದೂರಿಯಾಗಿ ನಡೆಯುವ ಕರಾವಳಿ ಉತ್ಸವಕ್ಕೆ ಭರದ ಸಿದ್ದತೆಗಳು ನಡೆಯುತ್ತಿದ್ದು, ಈ ಉತ್ಸವದ ಯಶಸ್ವಿಗಾಗಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ಒಳಗೊಂಡ ವಿವಿಧ ಸಮಿತಿಗಳನ್ನು ರಚಿಸಲಾಗಿದೆ.

ಕರಾವಳಿ ಉತ್ಸವದ ಕಾರ್ಯಕಾರಿ ಸಮಿತಿಯ ಗೌರವಾಧ್ಯಕ್ಷರಾಗಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಹಾಗೂ ವಿಧಾನ ಪರಿಷತ್‌ನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರನ್ನು ಮತ್ತು ಸದಸ್ಯ ಕಾರ್ಯದರ್ಶಿಯನ್ನಾಗಿ ಅಪರ ಜಿಲ್ಲಾಧಿಕಾರಿಗಳನ್ನು ನೇಮಿಸಲಾಗಿದೆ.

ಉತ್ಸವದ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಕರ್ನಾಟಕ ಮಾರ್ಕೇಟಿಂಗ್ ಕನ್ಸಲ್ಟೆಂಟ ಅಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ್ ಕೆ. ಸೈಲ್, ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಉತ್ತರ ಕನ್ನಡ ಜಿಲ್ಲೆ ಅವರನ್ನು ಹಾಗೂ ಸದಸ್ಯ ಕಾರ್ಯದರ್ಶಿಯನ್ನಾಗಿ ಕಾರವಾರ ತಹಸೀಲ್ದಾರ್ ಅವರನ್ನು ನೇಮಿಸಲಾಗಿದೆ.
ಹಣಕಾಸು ಸಮಿತಿಯ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಮತ್ತು ಸದಸ್ಯ ಕಾರ್ಯದರ್ಶಿಯನ್ನಾಗಿ ಜಿಲ್ಲಾ ಖಜಾನಾಧಿಕಾರಿ ಕಾರವಾರ ಅವರನ್ನು ನೇಮಿಸಲಾಗಿದೆ.
ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಉಪ ಕಾರ್ಯದರ್ಶಿಗಳು, ಆಡಳಿತ ವಿಭಾಗ, ಜಿಲ್ಲಾ ಪಂಚಾಯತ್ ಮತ್ತು ಸದಸ್ಯ ಕಾರ್ಯದರ್ಶಿಯನ್ನಾಗಿ ಜಿಲ್ಲಾ ವಾರ್ತಾಧಿಕಾರಿ ಕಾರವಾರ ಅವರನ್ನು ನೇಮಿಸಲಾಗಿದೆ.

300x250 AD

ವೇದಿಕೆ ಹಾಗೂ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷರಾಗಿ ಸಹಾಯಕ ಆಯುಕ್ತರು ಕಾರವಾರ ಮತ್ತು ಸದಸ್ಯ ಕಾರ್ಯದರ್ಶಿಯನ್ನಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರವಾರ ಅವರನ್ನು ನೇಮಿಸಲಾಗಿದೆ. ಸ್ಟಾಲ್‌ಗಳ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾಗಿ ಆಯುಕ್ತರು, ನಗರಸಭೆ ಕಾರವಾರ ಮತ್ತು ಸದಸ್ಯ ಕಾರ್ಯದರ್ಶಿಯನ್ನಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ ಅವರನ್ನು ನೇಮಿಸಲಾಗಿದೆ.
ಕ್ರೀಡಾ ಸಮಿತಿಯ ಅಧ್ಯಕ್ಷರಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಸೇವಾ ಕ್ರೀಡಾ ಇಲಾಖೆ, ಕಾರವಾರ ಮತ್ತು ಸದಸ್ಯ ಕಾರ್ಯದರ್ಶಿಯನ್ನಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾರವಾರ ಅವರನ್ನು ನೇಮಿಸಲಾಗಿದೆ.
 ಸಾರಿಗೆ ಸಮಿತಿಯ ಅಧ್ಯಕ್ಷರಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಾರವಾರ ಮತ್ತು ಸದಸ್ಯ ಕಾರ್ಯದರ್ಶಿಯನ್ನಾಗಿ ಡಿಪೋ ಮೆನೇಜರ್, ಕೆ.ಎಸ್.ಆರ್.ಟಿ.ಸಿ ಕಾರವಾರ ಅವರನ್ನು ನೇಮಿಸಲಾಗಿದೆ.
 ಆಹಾರ ಮತ್ತು ವಸತಿ ಸಮಿತಿಯ ಅಧ್ಯಕ್ಷರಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕಾರವಾರ ಮತ್ತು ಸದಸ್ಯ ಕಾರ್ಯದರ್ಶಿಯನ್ನಾಗಿ ಉಪ ನಿರ್ದೇಶಕರು, ಆಹಾರ ಇಲಾಖೆ, ಕಾರವಾರ ಅವರನ್ನು ನೇಮಿಸಲಾಗಿದೆ.
 ಭದ್ರತಾ ಸಮಿತಿಯ ಅಧ್ಯಕ್ಷರಾಗಿ ಪೊಲೀಸ್ ಅಧೀಕ್ಷಕರು, ಉತ್ತರ ಕನ್ನಡ ಕಾರವಾರ ಮತ್ತು ಸದಸ್ಯ ಕಾರ್ಯದರ್ಶಿಯನ್ನಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು (2), ಅಪರಾಧ ಮತ್ತು ಸಂಚಾರಿ ವಿಭಾಗ, ಉ.ಕ. ಕಾರವಾರ ಅವರನ್ನು ನೇಮಿಸಲಾಗಿದೆ.
 ಆರೋಗ್ಯ ಮತ್ತು ಸ್ವಚ್ಛತಾ ಸಮಿತಿಯ ಅಧ್ಯಕ್ಷರಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಾರವಾರ ಮತ್ತು ಸದಸ್ಯ ಕಾರ್ಯದರ್ಶಿಯನ್ನಾಗಿ ತಾಲೂಕು ಆರೋಗ್ಯಾಧಿಕಾರಿ ಕಾರವಾರ ಅವರನ್ನು ನೇಮಿಸಲಾಗಿದೆ.
 ವಿದ್ಯುತ್ ಮತ್ತು ನೀರು ಸರಬರಾಜು, ನೈರ್ಮಲ್ಯ ಹಾಗೂ ಅಲಂಕಾರ ಸಮಿತಿಯ ಅಧ್ಯಕ್ಷರಾಗಿ ಆಯುಕ್ತರು, ನಗರಸಭೆ, ಕಾರವಾರ ಮತ್ತು ಸದಸ್ಯ ಕಾರ್ಯದರ್ಶಿಯನ್ನಾಗಿ ಕಿರಿಯ ಅಭಿಯಂತರರು (ವಿದ್ಯುತ್) ನಗರಸಭೆ, ಕಾರವಾರ ಅವರನ್ನು ನೇಮಿಸಲಾಗಿದೆ.
 ಈ ಎಲ್ಲಾ ಸಮಿತಿಗಳಲ್ಲಿ ಸದಸ್ಯರನ್ನಾಗಿ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪತ್ರಕರ್ತರನ್ನು ಸದಸ್ಯರನ್ನಾಗಿ ನೇಮಿಸಿದ್ದು, ಕರಾವಳಿ ಉತ್ಸವವನ್ನು ವಿಜೃಂಭಣೆಯಿAದ ಆಚರಿಸಲು ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ.

Share This
300x250 AD
300x250 AD
300x250 AD
Back to top