ಅಂಕೋಲಾ: ಭಾಜಪ ಮಂಡಳ ಅಂಕೋಲಾ ಘಟಕದ ಅಧ್ಯಕ್ಷರು, ರಾಮನಗುಳಿ ಗ್ರೂಪ್ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಗೋಪಾಲಕೃಷ್ಣ ವೈದ್ಯ ಅವರಿಗೆ ತೀವ್ರ ಅಪಘಾತ ಸಂಭವಿಸಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಲೆಗೆ ಗಂಭೀರ ಪ್ರಮಾಣದಲ್ಲಿ ಅಪಘಾತ ಉಂಟಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಕೋಟೆಪಾಲ್ ನಿಂದ ಮನೆಗೆ ಬೈಕ್ ಮೇಲೆ ಹೋಗುತ್ತಿರುವಾಗ ಸುಂಕಸಾಳ ನವಮಿ ಹೊಟೇಲ್ ಎದುರು ರಾಷ್ಟ್ರೀಯ ಹೆದ್ದಾರಿಯ ಮೇಲೆ ಎಮ್ಮೆ ಅಡ್ಡ ಬಂದು ಬೈಕ್ ಸ್ಕಿಡ್ ಆಗಿ ಬಿದ್ದು ತಲೆಗೆ ಗಂಭೀರ ಗಾಯವಾಗಿದೆ. ತಕ್ಷಣ ನವಮಿ ಹೋಟೆಲಿನ ವಿನೋದ ಶೆಟ್ಟಿ ಅಂಬುಲೆನ್ಸ್ ಸಂಪರ್ಕಿಸಿ ಅಂಕೋಲಾ ತಾಲೂಕು ಸರಕಾರಿ ಆಸ್ಪತ್ರೆಗೆ ತಂದು ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯರ ಸಹಕಾರ ಪಡೆದು ತಕ್ಷಣ ಮಣಿಪಾಲ್ ಆಸ್ಪತ್ರೆಗೆ ಸಾಗಿಸಿದ್ದಾರೆ.
ಚಿಕಿತ್ಸೆ ನಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಕೋಟೆಪಾಲಿನ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ರಾತ್ರಿ ಮನೆಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ.