ಶಿರಸಿ: ಕನ್ನಡದ ಪೂಜಾರಿ, ವಾಗ್ಮಿ, ಹರಟೆ ಕಾರ್ಯಕ್ರಮಗಳ ಖ್ಯಾತಿಯ ಹಿರೇಮಗಳೂರು ಕಣ್ಣನ್ ಅವರ ಜೊತೆ ಮಾತುಕತೆ ಎಂಬ ವಿಶಿಷ್ಟ ಕಾರ್ಯಕ್ರಮ ಮೇ.31 ಹಾಗೂ ಜೂನ್ 1ರಂದು ನಗರದ ಟಿಎಂಎಸ್ ಸಭಾಂಗಣದಲ್ಲಿ ಸಂಜೆ 5.30ರಿಂದ ನಡೆಯಲಿದೆ.
ವಿಶ್ವಶಾಂತಿ ಸೇವಾ ಟ್ರಸ್ಟ್ ಕರ್ನಾಟಕ ಆಯೋಜಿಸಿದ ಕಾರ್ಯಕ್ರಮದಲ್ಲಿ ಕಣ್ಣನ್ ಅವರ ಜೊತೆ ಸಂಸ್ಕೃತಿ ಚಿಂತಕಿ ನಾಗಶ್ರೀ ತ್ಯಾಗರಾಜ್ ಸಂವಾದ ನಡೆಸಲಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್, ಟ್ರಸ್ಟ್ ಅಧ್ಯಕ್ಷ, ಹಿರಿಯ ಪತ್ರಕರ್ತ ರವೀಂದ್ರ ಭಟ್ಟ, ಧಾರವಾಡ ಹಾಲು ಒಕ್ಕೂಟದ ಉಪಾಧ್ಯಕ್ಷ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ರಾಜದೀಪ ಟ್ರಸ್ಟ್ ಅಧ್ಯಕ್ಷ ದೀಪಕ್ ದೊಡ್ಡೂರು ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್ ಕಾರ್ಯದರ್ಶಿ ಗಾಯತ್ರೀ ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.