ದಾಂಡೇಲಿ : ಬೆಳೆ ಸಾಲ ನೀಡದಿರುವುದನ್ನು ವಿರೋಧಿಸಿ ಹಾಗೂ ವಿವಿಧ ಕಾರಣಗಳನ್ನು ಮುಂದಿಟ್ಟುಕೊಂಡು ನಗರದ ಕುಳಗಿ ರಸ್ತೆಯಲ್ಲಿರುವ ದಾಂಡೇಲಪ್ಪಾ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಸಂಘದ ಐವರು ಸದಸ್ಯರು ಪ್ರತಿಭಟನೆ ಹಮ್ಮಿಕೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಸಂಘದ ಸದಸ್ಯರಾದ ಅಂಬೇವಾಡಿ ಗ್ರಾ.ಪಂ ಅಧ್ಯಕ್ಷ ಪ್ರಕಾಶ ಜಿ.ಈ, ಕಾಂಗ್ರೆಸ್ ಮುಖಂಡರುಗಳಾದ ಪರಶುರಾಮ ಎಚ್.ಬಿ, ದೇವೆಂದ್ರ ಹಂಶೆಟ್ಟರ್, ಪ್ರಕಾಶ ಮಿಶಾಲೆ, ದೇವೇಂದ್ರ ಅವರು ದಾಂಡೇಲಪ್ಪ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ದಾಂಡೇಲಿ ನಗರ ಠಾಣೆಯ ಪಿಎಸ್‌ಐ ಕಿರಣ್ ಪಾಟೀಲ್, ಗ್ರಾಮೀಣ ಠಾಣೆಯ ಪಿಎಸ್‌ಐ ಶಿವಾನಂದ ನಾವದಗಿ ಹಾಗೂ ನಗರ ಮತ್ತು ಗ್ರಾಮೀಣ ಠಾಣೆಯ ಪೊಲೀಸರು, ಕಂದಾಯ ನಿರೀಕ್ಷಕ ರಾಘವೇಂದ್ರ ಪಾಟೀಲ್, ಆಹಾರ ನಿರೀಕ್ಷಕ ಗೋಪಿ ಚೌವ್ಹಾಣ್ ಅವರು ಭೇಟಿ ನೀಡಿದ್ದಾರೆ. ಪ್ರತಿಭಟನೆ ಮುಂದುವರೆದಿದೆ.