ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ತಾಲ್ಲೂಕು ಆಡಳಿತ ಸೌಧದಲ್ಲಿ ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ತಾಲೂಕು ಮಟ್ಟದ ಸಭೆಯು ಜರುಗಿತು.
ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಿಯಾಜ್ ಬಾಬು ಸೈಯದ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಿಯಾಜ್ ಬಾಬು ಸೈಯದ್ ಅವರು ತಾಲೂಕಿನಲ್ಲಿ ಅನ್ನಭಾಗ್ಯ ಯೋಜನೆಯ ಪ್ರಯೋಜನವನ್ನು 12,325 ಕುಟುಂಬಗಳು ಪಡೆದುಕೊಳ್ಳುತ್ತಿದೆ. ಸಾರಿಗೆ ಇಲಾಖೆಯ ಶಕ್ತಿ ಯೋಜನೆಯಡಿ ಈವರೇಗೆ ತಾಲೂಕಿನ 90,11,142 ಮಹಿಳೆಯರು ಪ್ರಯಾಣಿಸಿದ್ದು, ಈ ಒಂದು ತಿಂಗಳಿನಲ್ಲಿ 3 ಲಕ್ಷ ಮಹಿಳೆಯರು ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಸಿದ್ದಾರೆ. ತಾಲೂಕಿನಲ್ಲಿ ಒಟ್ಟು 13,841 ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿದ್ದಾರೆ. 14,188 ಕುಟುಂಬಗಳು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದುಕೊಳ್ಳುತ್ತಿದ್ದಾರೆ. 169 ಫಲಾನುಭವಿಗಳು ಯುವನಿಧಿ ಯೋಜನೆಯ ಪ್ರಯೋಜವನ್ನು ಪಡೆದುಕೊಳ್ಳುತ್ತಿದ್ದಾರೆ. ಪಂಚ ಗ್ಯಾರಂಟಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಸರ್ವರು ಸಹಕರಿಸಬೇಕೆಂದು ಕರೆ ನೀಡಿದರು. ಪಂಚ ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ತೊಂದರೆಯಾದಲ್ಲಿ ತಕ್ಷಣವೇ ತಾಲೂಕು ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಗೆ ಮಾಹಿತಿಯನ್ನು ನೀಡುವಂತೆ ತಿಳಿಸಿದರು.
ಸಭೆಯಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಟಿ.ಸಿ.ಹಾದಿಮನಿ, ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದೀಪಕ ನಾಯಕ, ಸಾರಿಗೆ ಘಟಕದ ವ್ಯವಸ್ಥಾಪಕರಾದ ಎಲ್.ಎಚ್.ರಾಥೋಡ, ನಗರಸಭೆ ವ್ಯವಸ್ಥಾಪಕ ಪರಶುರಾಮ ಶಿಂದೆ, ಆಹಾರ ನಿರೀಕ್ಷಕ ಗೋಪಿ ಚೌವ್ಹಾಣ್, ಪಂಚ ಗ್ಯಾರಂಟಿ ಯೋಜನಾ ತಾಲೂಕು ಅನುಷ್ಠಾನ ಸಮಿತಿಯ ಸದಸ್ಯರುಗಳಾದ ದೇವೇಂದ್ರಪ್ಪ, ರಮೇಶ ಶೆಟ್ಟಣ್ಣನವರ, ಅಶೋಕ ನಾಯ್ಕ, ಚಂದ್ರು ಆರ್ಯ, ವೀಠ್ಠು ಜಾನು, ಮ್ಯಾಥ್ಯೂ ಕೊಂಡಟಿ, ವೀರೇಶ್, ರೇಷ್ಮಾ ಮೆಟ್ಗುಡ್, ಛಾಯಾ ಮಿಶಾಳೆ, ಪರಶುರಾಮ, ಸಿದ್ದರಾಜು ಹಾಗೂ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ವಿವಿಧ ಕಾಲೇಜುಗಳ ಪ್ರಾಚಾರ್ಯರು ಉಪಸ್ಥಿತರಿದ್ದರು.