ಶಿರಸಿ: ಶಿರಸಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಟ್ಕಳದ ಅಂಜುಮಾನ ಇನ್ಸ್‌ಟ್ಯೂಟ್ ಆಫ್ ಮ್ಯಾನೆಜಮೆಂಟ್ ಮತ್ತು ಕಂಪ್ಯೂಟರ್ ಅಪ್ಲಿಕೇಶನ್ ಮಹಾವಿದ್ಯಾಲಯದಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯದ 3 ನೇ ವಲಯ ಪುರುಷರ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಅಂತರ ವಲಯ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಶಿರಸಿ ತಂಡದ ಮಂಜುನಾಥ ಟಿ.ಎನ್ ಆಲ್ ರೌಂಡರ್ ಪ್ರಶಸ್ತಿ ಹಾಗೂ ಚಂದ್ರಶೇಖರ ನಾಯ್ಕ ಉತ್ತಮ ಡಿಫೆಂಡರ್ ಪ್ರಶಸ್ತಿ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ. ವಿದ್ಯಾರ್ಥಿಗಳಾದ ಹೇಮಂತ ಗೌಡ, ಚಂದ್ರಶೇಖರ ಗೌಡ, ವಿಠಲ, ವಿನಾಯಕ, ಕಿರಣ, ಸುದೀಪ, ಪ್ರಸನ್ನ ಇವರುಗಳನ್ನೊಳಗೊಂಡ ತಂಡ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದರು. ಕ್ರೀಡಾ ಸಾಧನೆಗೈದ ವಿದ್ಯಾರ್ಥಿಗಳಿಗೆ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಶಾಸಕ ಭೀಮಣ್ಣ ಟಿ.ನಾಯ್ಯ, ಪ್ರಾಂಶುಪಾಲರಾದ ಪ್ರೋ, ಜನಾರ್ದನ ಭಟ್, ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ವಿನಾಯಕ ಪಟಗಾರ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಮಹಾವಿದ್ಯಾಲಯದ ಸರ್ವ ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.