ಹೊನ್ನಾವರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ತಾಲೂಕಿನ ದಿಬ್ಬಣಗಲ್ ಸಮೀಪ ಸರಕು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಪಲ್ಟಿಯಾಗಿದೆ.
ಹೊನ್ನಾವರದಿಂದ ಗೇರುಸೊಪ್ಪಾ ಮಾರ್ಗವಾಗಿ ತೆರಳುತ್ತಿರುವ ಸಂದರ್ಭದಲ್ಲಿ ದಿಬ್ಬಣಗಲ್ ಸಮೀಪದ ಅಪಾಯಕಾರಿ ತಿರುವಿನಲ್ಲಿ ವಾಹನ ಪಲ್ಟಿಯಾಗಿದೆ. ಘಟನೆಯಲ್ಲಿ ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಅಪಘಾತದಲ್ಲಿ ವಾಹನಕ್ಕೆ ಹಾನಿಯಾಗಿದ್ದು, ಒಂದು ಟಯರ್ ಬ್ಲಾಸ್ಟ್ ಆಗಿದೆ. ಅಪಾಯಕಾರಿ ತಿರುವಿನಿಂದ ಅಥವಾ ಟಯರ್ ಬ್ಲಾಸ್ಟ್ ಪರಿಣಾಮವೋ ವಾಹನ ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ ಎನ್ನಲಾಗಿದೆ.