ದಾಂಡೇಲಿ : ನಗರದ ರೋಟರಿ ಶಿಕ್ಷಣ ಸಂಸ್ಥೆಯ ರೋಟರಿ ಆಂಗ್ಲ ಮಾಧ್ಯಮ ಶಾಲೆಗೆ ಅಂದಾಜು ತಲಾ ರೂ.15 ಲಕ್ಷ ವೆಚ್ಚದಲ್ಲಿ ಆರ್ಡೆಕ್ಸ್ ಇಂದೂರ ಮತ್ತು ಎಂಪಿಪಿ ಟೆಕ್ನಾಲಜಿಸ್ ಇವರ ಸಿಎಸ್ಆರ್ ಯೋಜನೆಯ ಅನುದಾನದಡಿ ನೂತನವಾಗಿ ನಿರ್ಮಿಸಲಾದ ಎರಡು ಕೊಠಡಿಗಳ ಉದ್ಘಾಟನೆಯು ಶುಕ್ರವಾರ ಸಂಜೆ ಜರುಗಿತು.
ನೂತನ ಕೊಠಡಿಯನ್ನು ರೋಟರಿ ಜಿಲ್ಲಾ ಪ್ರಾಂತಪಾಲರಾದ ಸತೀಶ್ ಮಾಧವನ್ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲಾ ಪ್ರಾಂತಪಾಲ ಶರದ್ ಪೈ, ಬೆಂಗಳೂರಿನ ರೋಟರಿ ಕ್ಲಬ್ ಅಧ್ಯಕ್ಷ ಜಾವೇದ್ ಎಂ.ಖತೀಬ್, ಆರ್ಡೆಕ್ಸ್ ಇಂದೂರ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕರಾದ ಸಿಂದು ರಾಮು ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಮೋಹನ ಪಾಟೀಲ್ ಅವರು ವಹಿಸಿದ್ದರು.
ಈ ಸಂದರ್ಭದಲ್ಲಿ ದಾಂಡೇಲಿ ರೋಟರಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಲಿಯೋ ಪಿಂಟೋ, ರೋಟರಿ ಕ್ಲಬ್ ಅಧ್ಯಕ್ಷ ರಾಹುಲ್ ಬಾವಾಜಿ, ಪ್ರಧಾನ ಕಾರ್ಯದರ್ಶಿ ಅಶುತೋಷ ಕುಮಾರ್ ರಾಯ್ ಹಾಗೂ ರೋಟರಿ ಕ್ಲಬ್ಬಿನ ಪದಾಧಿಕಾರಿಗಳು, ಸದಸ್ಯರು, ದಾಂಡೇಲಿ ರೋಟರಿ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಮತ್ತು ಸದಸ್ಯರು, ರೋಟರಿ ಕನ್ನಡ ಮಾಧ್ಯಮ ಶಾಲೆ ಹಾಗೂ ರೋಟರಿ ಪ್ರೌಢಶಾಲೆ ಮತ್ತು ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.