ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳ (PUC, ITI, Diploma, D.ed, B.ed, BE ಪದವಿ, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಮುಂತಾದ ಕೋರ್ಸಿನ ವಿದ್ಯಾರ್ಥಿಗಳಿಗೆ) ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಸೀಟುಗಳು (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಹಾಗೂ ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗಗಳ ಸಮುದಾಯದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸೀಟುಗಳು ಮೀಸಲಿರಿಸಿದೆ. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ರೂ.2.50 ಲಕ್ಷ ಮೀರಿರಬಾರದು. ಪ್ರವೇಶ ಪಡೆಯಲು ವೆಬ್ಸೈಟ್ https://shp.karnataka.gov.in ರಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂ.28 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://dom.karnataka.gov.in/ ಗೆ ಭೇಟಿ ನೀಡಬಹುದಾಗಿದೆ. ಹಾಗೂ ತಾಲೂಕಿನ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಅಥವಾ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಉತ್ತರ ಕನ್ನಡ, ಕಾರವಾರ ದೂರವಾಣಿ ಸಂಖ್ಯೆTel:+9108382220336 ಅಥವಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಹಾಯವಾಣಿTel:+918277799990 ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
