ಜೋಯಿಡಾ : ಜೋಯಿಡಾ – ದಾಂಡೇಲಿ ರಾಜ್ಯ ಹೆದ್ದಾರಿಯಲ್ಲಿ ಬರುವ ಬಾಮಣಗಿಯ ಹತ್ತಿರ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿದ ಘಟನೆ ಇಂದು ಮಂಗಳವಾರ ಮಧ್ಯಾಹ್ನ 3 ರಿಂದ 3.30 ಗಂಟೆಯ ಅವಧಿಯಲ್ಲಿ ನಡೆದಿರುವ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.