ಶಿರಸಿ: ಬಿಜೆಪಿ ಒಬಿಸಿ ಮೋರ್ಚಾ ಗ್ರಾಮೀಣ ಮತ್ತು ನಗರ ಘಟಕಗಳಿಂದ ಇಂದು ಶಿರಸಿಯ ಯಲ್ಲಾಪುರ ನಾಕದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತೆ ಮಾಡಿದರು.
ಗಾಂಧೀಜಿಯವರ ಜನ್ಮ ದಿನಾಚರಣೆಯ ಜೊತೆಗೆ ದೇಶ ಕಂಡ ಹೆಮ್ಮೆಯ ಪ್ರಧಾನಿ, ದೇಶಕ್ಕಾಗಿ ಸರ್ವಸ್ವನ್ನು ತ್ಯಾಗ ಮಾಡಿದ ಮಹಾನ್ ಚೈತನ್ಯರಾದ ಲಾಲ್ ಬಹಾದ್ದೂರ್ ಶಾಸ್ತ್ರಿಜಿಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಎನ್-95 ಮಾಸ್ಕ್ ಮತ್ತು ಸ್ಯಾನಿಟೈಸರ್’ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಎಸಳೆ, ಜಿಲ್ಲಾ ಸಾಮಾಜಿಕ ಜಾಲತಾಣದ ಪ್ರಮುಖರಾದ ಡಾನಿ ಡಿಸೋಜ, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಹಾದಿಮನಿ, ಬಿಜೆಪಿ ಒಬಿಸಿ ಮೋರ್ಚಾ ಗ್ರಾಮೀಣ ಘಟಕದ ಅಧ್ಯಕ್ಷ ಸತೀಶ ನಾಯ್ಕ್ ಔಢಾಳ, ಗ್ರಾಮೀಣ ಘಟಕದ ಪ್ರಧಾನ ಕಾರ್ಯದರ್ಶಿ ಸುಧೀರ್ ದೇವಾಡಿಗ, ಅಶೋಕ್ ಶೆಟ್ಟಿ, ಗೋಪಾಲ ಶೇಟ್, ಅಕ್ಷಯ್ ಮತ್ತು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.