ದಾಂಡೇಲಿ : ತಾಲ್ಲೂಕು ಪಂಚಾಯ್ತ, ಅಂಬೇವಾಡಿ ಗ್ರಾ.ಪಂ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಡಿ ಅಂಬೇವಾಡಿಯ ಚೆಸ್ ಪಾರ್ಕಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಚೆಸ್ ಪಂದ್ಯಾವಳಿಯು ಯಶಸ್ವಿಯಾಗಿ ಸಂಪನ್ನಗೊಂಡಿತು.
ಈ ಪಂದ್ಯಾವಳಿಯಲ್ಲಿ ದಾಂಡೇಲಿ ನಗರ ಪ್ರದೇಶದ ಹಾಗೂ ಅಂಬೇವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.