ಕಾರವಾರ: ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕುಮಟಾದಲ್ಲಿ ಜೂ.11 ರಿಂದ ಜುಲೈ. 10 ವರೆಗೆ ಮೊಬೈಲ್(ಸ್ಮಾರ್ಟ) ಫೋನ್ ರಿಪೇರಿ ತರಬೇತಿ (ಎಲ್ಲಾ ಕಂಪನಿಯ ಮೋಬೈಲ್‌ಗಳ ಹಾರ್ಡವೇರ್ ಮತ್ತು ಸಾಪ್ಟವೇರ್ ರಿಪೇರಿಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು. ಹಾಗೂ ಕನಿಷ್ಟ ವಿದ್ಯಾರ್ಹತೆ ಕನ್ನಡ ಓದಲು ಬರೆಯಲು ಬರಬೇಕು ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು. ಈ ತರಬೇತಿಯ ಜೊತೆಗೆ ವ್ಯಕ್ತಿತ್ವ ವಿಕಸನ, ಬ್ಯಾಂಕಿಂಗ್, ಮಾರ್ಕೇಟಿಂಗ್ ಹೀಗೆ ಮುಂತಾದ ಉದ್ಯಮಶೀಲತಾ ತರಬೇತಿಯನ್ನು ನೀಡಲಾಗುವುದು. ಆಸಕ್ತರು ತರಬೇತಿಗೆ ಬರುವಾಗ 4 ಪಾಸ್ ಪೋರ್ಟ ಸೈಜ್ ಫೋಟೋ,ರೇಶನ್ ಕಾರ್ಡ,ಆಧಾರ್ ಕಾರ್ಡ, ಬ್ಯಾಂಕ್ ಪಾಸ್‌ಬುಕ್,ಪಾನ್ ಕಾರ್ಡ ಇವುಗಳ 1 ಝೆರಾಕ್ಸ್ ಪ್ರತಿಯನ್ನು ತರಬೇಕು.
ಆಸಕ್ತ ಅಭ್ಯರ್ಥಿಗಳು ನಿರ್ದೇಶಕರು, ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಇಂಡಸ್ಟ್ರಿಯಲ್ ಏರೀಯಾ, ಹೆಗಡೆ ರಸ್ತೆ, ಕುಮಟಾ -581343 ಉತ್ತರ ಕನ್ನಡ ಜಿಲ್ಲೆ ಇವರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೇ ದೂರವಾಣಿ ಸಂಖ್ಯೆ 9449860007, 9538281989, 9916783825, 8880444612, 9620962004, ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೊಬೈಲ್ ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ
