ದಾಂಡೇಲಿ : ನಗರದ ಐಪಿಎಂ ಹತ್ತಿರದ ಅರಣ್ಯ ಪ್ರದೇಶದಲ್ಲಿ ವೃದ್ಧೆಯ ಮೇಲೆ ಅತ್ಯಾಚಾರ ನಡೆದ ಬಗ್ಗೆ ಆರೋಪ ಕೇಳಿ ಬಂದಿದ್ದು, ಅತ್ಯಾಚಾರಕ್ಕೊಳಗಾದ ವೃದ್ಧೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಸ್ಥಳೀಯ ನಿವಾಸಿಯಾಗಿರುವ 60 ವರ್ಷ ವಯಸ್ಸಿನ ವೃದ್ಧೆ ಸಂಬಂಧಿಕರ ಮನೆಗೆ ಹೋಗಿ ತನ್ನ ಮನೆಗೆ ಹಿಂದಿರುಗಿ ಬರುತ್ತಿರುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಸಂತ್ರಸ್ತ ವೃದ್ಧೆಯನ್ನು ತಕ್ಷಣವೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆಗೆ ದಾಖಲಿಸಲಾಗಿದೆ. ಸಾರ್ವಜನಿಕ ಆಸ್ಪತ್ರೆಗೆ ಡಿವೈಎಸ್ಪಿ ಶಿವಾನಂದ ಮದರಖಂಡಿ, ಸಿಪಿಐ ಜೈಪಾಲ್ ಪಾಟೀಲ್, ಪಿಎಸ್‌ಐ ಕಿರಣ್ ಪಾಟೀಲ್ ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಅತ್ಯಾಚಾರವೆಸಗಿದ ಆರೋಪಿ ಪರಾರಿಯಾಗಿದ್ದಾನೆ ಎನ್ನುವ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ. ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.