ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ವಿಶ್ವೇಶ್ವರಯ್ಯ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ. ಭೇಟಿ ನೀಡಿದರು.
ವಿಶ್ವೇಶ್ವರಯ್ಯ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ನೀಡುವ ತರಬೇತಿಯ ಬಗ್ಗೆ ವೀಕ್ಷಣೆ ಮಾಡಿದ ನಾರಾಯಣ.ಎಂ ಅವರು ತರಬೇತಿಯ ವಿಶೇಷತೆ ಹಾಗೂ ವಿಶ್ವೇಶ್ವರಯ್ಯ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದ ಕಾರ್ಯಚಟುವಟಿಕೆಗಳ ಬಗ್ಗೆ ಕೇಂದ್ರದ ಅಧಿಕಾರಿಗಳಲ್ಲಿ ಮಾಹಿತಿಯನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಶಿವಾನಂದ ಮದರಖಂಡಿ, ಸಿಪಿಐ ಜೈಪಾಲ್ ಪಾಟೀಲ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.