ಕಾರವಾರ: ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ವತಿಯಿಂದ ಬೆಂಗಳೂರಿನ ಹಜ್ ಭವನದಲ್ಲಿ ವಸತಿಯುತ ತರಬೇತಿ ಅಥವಾ ಶಿಷ್ಯ ವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ 3 ತಿಂಗಳ ಯುಪಿಎಸ್‌ಸಿ ಮುಖ್ಯ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತಿದ್ದು, ಸದರಿ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸದರಿ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು, ಅಭ್ಯರ್ಥಿಯು ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ವಯಸ್ಸು 21 ರಿಂದ 35, ಸದರಿ ಅಭ್ಯರ್ಥಿಯು ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ಜೂ.21 ಕೊನೆಯ ದಿನವಾಗಿದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲಾಖಾ ವೆಬ್‌ಸೈಟ್ https://dom.karnataka.gov.in ಬೇಟಿ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ತಾಲೂಕಿನ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಅಥವಾ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಾರವಾರ ದೂರವಾಣಿ ಸಂಖ್ಯೆ Tel:+9108382220336 ಅಥವಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಹಾಯವಾಣಿ Tel:+918277799990 ಇಲ್ಲಿಗೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುಪಿಎಸ್‌ಸಿ ಮುಖ್ಯ ಪರೀಕ್ಷಾ ಪೂರ್ವ ತರಬೇತಿ: ಅರ್ಜಿ ಆಹ್ವಾನ
