ಕಾರವಾರ: ಕರ್ನಾಟಕ ರಾಜ್ಯದ ಮತೀಯ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದಲ್ಲಿ (ಎಸ್.ಎಸ್.ಪಿ)ಯಲ್ಲಿ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದÀ ಶುಲ್ಕ ಮರುಪಾವತಿ ಯೋಜನೆಯಡಿ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ (ಸಾಮಾನ್ಯ ಪದವಿ, ಸ್ನಾತಕೋತ್ತರ ಪದವಿಗಳಿಗೆ) ರೂ.2 ಲಕ್ಷಗಳು ಹಾಗೂ (ವೃತ್ತಿಪರ ಮತ್ತು ತಾಂತ್ರಿಕ ಕೋರ್ಸುಗಳಿಗೆ) 2.5 ಲಕ್ಷಗಳು ಮೀರಿರಬಾರದು. ಕಡ್ಡಾಯವಾಗಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ (NPCI Mapping Active) ಆಧಾರ ಜೋಡಣೆಯಾಗಿದೆಯೇ ಎಂದು ಖಚಿತ ಪಡಿಸಿಕೊಳ್ಳತಕ್ಕದ್ದು, ಅರ್ಜಿ ಗಳನ್ನು https://ssp.karnataka.gov.in ವೆಬ್‌ಸೈಟ್‌ನಲ್ಲಿ ಸಲ್ಲಿಸಬೇಕು.
ಎಸ್.ಎಸ್.ಪಿ ಯಲ್ಲಿ ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನಾಂಕವಾಗಿದ್ದು, ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://dom.karnataka.gov.in ಅಥವಾ ಸಹಾಯವಾಣಿ:Tel:+918277799990 ಗೆ ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಕ್ಕೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಟ್ರಿಕ್ ನಂತರದ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ
