ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ಒಟ್ಟು 25ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ವೈದ್ಯಕೀಯ ಪ್ರವೇಶಕ್ಕಾಗಿ ನಡೆಸಲಾಗುವ NEET – 2025 ರಲ್ಲಿ ಅತ್ಯುತ್ತಮ ಸಾಧನೆ ಮಾಡಿ ವೈದ್ಯಕೀಯ ಶಿಕ್ಷಣಕ್ಕೆ ಅರ್ಹತೆಯನ್ನು ಗಳಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಕು. ಸಿಂಧು ಎಮ್. 516 ಅಂಕಗಳಿಸಿ ರಾಷ್ಟ್ರ ಮಟ್ಟದಲ್ಲಿ ಕೇಟಗರಿಯಲ್ಲಿ 192 ನೇ ಸ್ಥಾನ ಗಳಿಸಿ ಸಂಸ್ಥೆಯ ಗರಿಮೆಯನ್ನು ಹೆಚ್ಚಸಿದ್ದಾಳೆ ಮತ್ತು ಕು. ಸಿಂಚನಾ ಎಮ್. ನಾಯ್ಕ 474 ಅಂಕಗಳಿಸಿ ರಾಷ್ಟ್ರ ಮಟ್ಟದಲ್ಲಿ 10,758 ನೇ ಸ್ಥಾನ ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾಳೆ ಹಾಗೂ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಎಲ್ಲರೂ ಉತ್ತಮ ಅಂಕಗಳಿಸಿ ವೈದ್ಯಕೀಯ ಪ್ರವೇಶಕ್ಕೆ ಅರ್ಹತೆಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕೊಂಕಣ ಎಜುಕೇಶನ್ ಟ್ರಸ್ಟ್ ನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕರಾದ ಗುರುರಾಜ ಶೆಟ್ಟಿಯವರು, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಮುಂದಿನ ಶಿಕ್ಷಣಕ್ಕೆ ಶುಭ ಹಾರೈಸಿದ್ದಾರೆ.