ಕುಮಟಾ: ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ 2.0 ಯೋಜನೆಯಡಿ ನಗರದ ವಸತಿ ರಹಿತ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ (ಕಚ್ಚಾ ಮನೆ ಹೊಂದಿರುವ) ವಸತಿ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರದ Unified web portal ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಕುಮಟಾ ಪುರಸಭಾ ವ್ಯಾಪ್ತಿಯೊಳಗಿನ ಎಲ್ಲಾ ವಾರ್ಡಗಳಲ್ಲಿರುವ ವಸತಿ ರಹಿತ (ಕಚ್ಚಾ ಮನೆ ಹೊಂದಿರುವ) ಮತ್ತು ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ಪಡೆಯಲು ಕೇಂದ್ರ ಸರ್ಕಾರದ http://https//pmay.urban.gov.in ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದೆ. (ಅರ್ಜಿ ಸಲ್ಲಿಸಿದ ಒಂದು ಪ್ರತಿಯನ್ನು ದಾಖಲೆಗಳೊಂದಿಗೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ) ಹೆಚ್ಚಿನ ಮಾಹಿತಿಗಾಗಿ ಪುರಸಭೆ ಕಾರ್ಯಾಲಯದ ವಸತಿ ಶಾಖೆಯನ್ನು ಸಂಪರ್ಕಿಸುವಂತೆ ಕುಮಟಾ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಸತಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
