ಬನವಾಸಿ: ಇಲ್ಲಿಯ ಪೊಲೀಸ್ ಠಾಣೆಯ ತನಿಖಾ ಪಿಎಸ್ಐ ಸುನೀಲ್ ಕುಮಾರ್ ನೇತೃತ್ವದಲ್ಲಿ ಮಾದಕ ವಸ್ತುಗಳ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಸೋಮವಾರದಂದು
ಪಟ್ಟಣದ ಪ್ರಮುಖ ರಸ್ತೆ ಮತ್ತು ಪಂಪ ವೃತ್ತದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು. ಆಟೋ ಮತ್ತು ಗೂಡ್ಸ್ ವಾಹನ ಚಾಲಕರು, ಸಾರ್ವಜನಿಕರು, ಪೊಲೀಸ್ ಸಿಬ್ಬಂದಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಬನವಾಸಿಯಲ್ಲಿ ಜಾಗೃತಿ ಜಾಥಾ
