ಕುಮಟಾ: ಪಟ್ಟಣದ ಗಿಬ್ ಪ್ರೌಢಶಾಲೆಯ ರಾಜೇಂದ್ರ ಪ್ರಸಾದ ಸಭಾಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕಾ ಘಟಕ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರು ಮತ್ತು ಪ್ರಶಸ್ತಿ ಪುರಸ್ಕೃತರ ಸನ್ಮಾನ ಹಾಗೂ ವಾರ್ಷಿಕ ಸಾಮಾನ್ಯ ಸಭಾ ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಸರ್ಕಾರಿ ನೌಕರರು ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ಆ ಭಾಗದ ಜನಪ್ರತಿನಿಧಿಗಳಿಗೆ ಒಳ್ಳೆಯ ಹೆಸರು ಬರಲು ಸಾಧ್ಯ. ಈ ನಿಟ್ಟಿನಲ್ಲಿ ತಾಲೂಕಿನ ಸರಕಾರಿ ನೌಕರರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿದೆ. ಸರಕಾರಿ ನೌಕರರ ಸಂಘವು ದೊಡ್ಡ ಪ್ರಮಾಣದಲ್ಲಿ ಸಂಘಟಿಸಿ ಸಾಧಕರಿಗೆ ಹಾಗೂ ವಿಧ್ಯಾರ್ಥಿಗಳಿಗೆ ಗೌರವಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಡಾಯಟ್ ಪ್ರಾಚಾರ್ಯ ಈಶ್ವರ ನಾಯ್ಕ ಮಾತನಾಡಿದರು. ಸರ್ಕಾರಿ ನೌಕರರ ಸಂಘ ತಾಲೂಕಾ ಘಟಕದ ಅಧ್ಯಕ್ಷ ಬಿ.ಡಿ ನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕಾ ಮಟ್ಟದ ಸರ್ಕಾರಿ ನೌಕರರ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಮಕ್ಕಳ ಪ್ರತಿಭಾ ಪುರಸ್ಕಾರ, ನಿವೃತ್ತ ಸರ್ಕಾರಿ ನೌಕರರ ಮತ್ತು ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಯಿತು.
ತಹಶೀಲ್ದಾರ ವಿವೇಕ ಶೆಣ್ವಿ, ತಾಲೂಕ ಪಂಚಾಯತ ಇಓ ಸಿ ಟಿ ನಾಯ್ಕ, ಸರ್ಕಾರಿ ತಾಲೂಕಾಸ್ಪತ್ರೆಯ ಆಡಳಿತಾಧಿಕಾರಿ ಗಣೇಶ ನಾಯ್ಕ, ಪುರಸಭೆ ಮುಖ್ಯಾಧಿಕಾರಿ ಸುರೇಶ ಎಂ ಕೆ., ಎಸ್‍ಎಸ್‍ಎ ಸಮನ್ವಯಾಧಿಕಾರಿ ರೇಖಾ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು. ಸರ್ಕಾರಿ ನೌಕರರ ತಾಲೂಕಾ ಕಾರ್ಯದರ್ಶಿ ಎನ್ ಆರ್ ನಾಯ್ಕ ಸ್ವಾಗತಿಸಿದರು. ಗುರುದಾಸ ಮಹಾಲೆ ವಂದಿಸಿದರು, ಉಮೇಶ ನಾಯ್ಕ ನಿರೂಪಿಸಿದರು