ಯಲ್ಲಾಪುರ: ಟೊಕಿಯೋ ಒಲೆಂಪಿಕ್ಸ್’ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರ ಅವರ ಗುರು ಹಾಗೂ ಜಾವೆಲ್ ತರಬೇತುದಾರರಾದ ಕಾಶಿನಾಥ ನಾಯ್ಕ ಅವರು ಅಕ್ಟೊಬರ್ 5ರ ಮಂಗಳವಾರ ತಾಲೂಕಿನ ವಿಶ್ವದರ್ಶನ ಶಿಕ್ಷಣ ಸಂಸ್ಥೆಗೆ ಆಗಮಿಸಲಿದ್ದಾರೆ ಎಂದು ಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಅಂದು ಬೆಳಗ್ಗೆ 11 ಗಂಟೆಗೆ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಬೆಳಕಿನಂದ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ನಡೆಯುವ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ನಂತರ ಕ್ರೀಡಾ ಕ್ಷೇತ್ರದ ಸಾಧನೆಗಳ ಬಗ್ಗೆ ಅವರು ವಿದ್ಯಾರ್ಥಿಗಳೊಂದಿಗೆ ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕರಾದ ನರಸಿಂಹ ಕೋಣೆಮನೆ ಅವರು ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.