Slide
Slide
Slide
previous arrow
next arrow

ಉತ್ತಮ ಆರೋಗ್ಯದಿಂದ ಸುಗಮ ಜೀವನ ನಡೆಸಲು ಸಾಧ್ಯ: ಡಾ.ಹರ್ಷ ಹೆಗಡೆ

300x250 AD

ಕುಮಟಾ: ಸ್ಥಳೀಯ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಮಹಾತ್ಮಾಗಾಂಧಿ ಪ್ರೌಢಶಾಲೆ ಚಿತ್ರಿಗಿಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ (National Service Scheme) ಅಡಿಯಲ್ಲಿ “Medical and Dental Camp” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಪ್ರಸ್ತುತ ದಿನಗಳಲ್ಲಿ ವಿದ್ಯೆಯ ಜೊತೆಗೆ ಆರೋಗ್ಯವು ಬಹಳ ಮುಖ್ಯವಾಗಿರುತ್ತದೆ. ದೈನಂದಿನ ಜೀವನದಲ್ಲಿ ಉತ್ತಮ ಆರೋಗ್ಯದ ಕಡೆ ಗಮನ ಹರಿಸಿ “ಆರೋಗ್ಯವೇ ಭಾಗ್ಯ” ಎಂಬ ನುಡಿಗೆ ಅರ್ಥಪೂರ್ಣ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಡಾ. ಹರ್ಷ ಹೆಗಡೆ ಜೀವನವು ಸುಗಮವಾಗಿರಬೇಕೆಂದರೆ ಆರೋಗ್ಯವು ಬಹಳ ಮುಖ್ಯ. ಆಧುನಿಕ ಜೀವನ ಶೈಲಿಯಲ್ಲಿ ಆರೋಗ್ಯದ ಕಡೆ ಸದಾ ಗಮನವಿರಲಿ ಹಾಗೂ ದೈಹಿಕ ಮತ್ತು ದಂತದ ಆರೋಗ್ಯದ ಬಗ್ಗೆ ಸೂಕ್ತ ಮಾಹಿತಿಯನ್ನು ನೀಡಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಪವಿತ್ರಾ ಇವರು ನಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಹೇಗೆ ಶುಚಿಯಾಗಿ ಇಟ್ಟುಕೊಳ್ಳಬೇಕು ಮತ್ತು ಉತ್ತಮ ಆರೋಗ್ಯಕ್ಕೆ ಶುಚಿತ್ವ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಶಾಲಾ ಮುಖ್ಯಸ್ಥರಾದ ಪಾಂಡುರಂಗ ವಾಗ್ರೇಕರ್‌ರವರು ಸಭೆಯನ್ನು ಉದ್ದೇಶಿಸಿ ದೈಹಿಕ ಆರೋಗ್ಯದ ಮಹತ್ವವನ್ನು ಔಚಿತ್ಯ ಪೂರ್ಣವಾಗಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಶ್ರೀಮತಿ ರೇಖಾ ಸಿ. ಯಲಿಗಾರರವರು ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶ್ರೀಮತಿ ಮೈತ್ರಿ ಮಡಿವಾಳ FPA ಕುಮಟಾ ಕಾರ್ಯಕ್ರಮಾಧಿಕಾರಿ ಉಪಸ್ಥಿತರಿದ್ದರು. ಶಿಕ್ಷಕರಾದ ಅನಿಲ ರೊಡ್ರಿಗೀಸ್ ಅವರು ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಬಿ.ಇಡಿ ಪ್ರಶಿಕ್ಷಣಾರ್ಥಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top