ಸಿದ್ದಾಪುರ: ಇಲ್ಲಿನ ಶಿಕ್ಷಣ ಪ್ರಸಾರ ಸಮಿತಿಯ ಚೇತನಾ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಪಾಲಕರ ಸಭೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿಗಳಲ್ಲಿ ಇತ್ತೀಚಿಗೆ ಓದುವ ಹವ್ಯಾಸ ಕಡಿಮೆ ಆಗುತ್ತಿದೆ. ಪುಸ್ತಕಕ್ಕೆ ಹೆಚ್ಚು ಪ್ರಾಮುಖ್ಯತೆಯನ್ನು ಸ್ಪರ್ಧಾತ್ಮಕ ಯುಗದಲ್ಲಿ ನೀಡಬೇಕಾದ ಅನಿವಾರ್ಯತೆ ಇದೆ,ಆ ನಿಟ್ಟಿನಲ್ಲಿ ಪಾಲಕರು ಮಕ್ಕಳಿಗೆ ತಿಳಿ ಹೇಳಬೇಕು ಎಂದು ಶೈಕ್ಷಣಿಕ ಸಲಹೆಗಾರ ಹಾಗೂ ನಿವೃತ್ತ ಶಿಕ್ಷಕ ಎಂ.ಎಸ್.ಭಟ್ಟ. ಹೇಳಿದರು.
ಅವರು ಪಾಲಕರ ಸಭೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಧ್ಯಕ್ಷತೆ ವಹಿಸಿಕೊಂಡಿದ್ದ ಕಾಲೇಜಿನ ಪ್ರಾಚಾರ್ಯ ರಾಜು ಭಟ್ಟ ಮಾತನಾಡಿ “ಪಾಲಕರು ವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗ ಪ್ರೋತ್ಸಾಹ ನೀಡಬೇಕು. ಯಾವುದೇ ರೀತಿಯ ಒತ್ತಡವನ್ನು ಹೇರಬೇಡಿ. ವಿದ್ಯಾರ್ಥಿಗಳಲ್ಲಿರುವ ಉತ್ಸಾಹಕ್ಕೆ ನೀರೆರೆದು ಉತ್ತೇಜನ ನೀಡಬೇಕು” ಎಂದರು. ದೀಕ್ಷಾ ಮತ್ತು ಸಂಗಡಿಗರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮ ಉಪನ್ಯಾಸಕಿ ಶಿಲ್ಪಾ ಭಟ್ಟ ಅವರ ವಂದನಾರ್ಪಣೆಯೊಂದಿಗೆ ಮುಕ್ತಾಯವಾಯಿತು. ಉಪನ್ಯಾಸಕ ವಿಘ್ನೇಶ್ವರ ಭಟ್ಟ ಸ್ವಾಗತಿಸಿದರು. ವಿದ್ಯಾರ್ಥಿನಿ ಕು. ಕೆ.ಎಸ್. ರಕ್ಷಿತಾ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದಿದ್ದಕ್ಕೆ ಸನ್ಮಾನ ಮಾಡಲಾಯಿತು. ಉಪನ್ಯಾಸಕಿ ಕು. ಮೇಘನಾ ಕಾರ್ಯಕ್ರಮ ನಿರೂಪಿಸಿದರು.ವಿದ್ಯಾರ್ಥಿಗಳ ಪಾಲಕರು ಮಾತನಾಡಿದರು.ಎಲ್ಲ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.