ಹೊನ್ನಾವರ : ತಾಲೂಕಿನ ಕಡತೋಕದ ಎಚ್. ಎಸ್. ವಿಶಾಲ್ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದಾರೆ.
ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಡತೋಕದಲ್ಲಿ ಕನ್ನಡ ಮಾಧ್ಯಮದಲ್ಲಿ ಪಡೆದಿದ್ದು, ನಂತರ ಕೊಂಕಣ ಎಜುಕೇಶನ್ ಟ್ರಸ್ಟ್ ನ ಸಿವಿಎಸ್ಕೆ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿಯಲ್ಲಿ 97.6% ಅಂಕಗಳೊಂದಿಗೆ ಉತ್ತೀರ್ಣರಾಗಿದ್ದರು. ಕೊಂಕಣ ಎಜುಕೇಶನ್ ಟ್ರಸ್ಟ್ ನ ಸರಸ್ವತಿ ಪಿ. ಯು ಕಾಲೇಜ್ನಲ್ಲಿ ಪಿಯುಸಿ ಕಲಿತು ಪರೀಕ್ಷೆಯಲ್ಲಿ 97.5% ಅಂಕಗಳನ್ನು ಗಳಿಸಿ ಶ್ರೇಷ್ಠ ಶೈಕ್ಷಣಿಕ ಸಾಧನೆ ಮಾಡಿದ್ದರು.
ನಂತರದ ವರ್ಷಗಳಲ್ಲಿ ಚಾರ್ಟರ್ಡ್ ಅಕೌಂಟೆಂಟ್ (CA) ಪದವಿಯಲ್ಲಿ ಮೊದಲ ಪ್ರಯತ್ನದಲ್ಲೇ ಉತ್ತೀರ್ಣವಾಗುವಲ್ಲಿ ಯಶಸ್ವಿ ಕಂಡಿದ್ದಾರೆ. ಪ್ರಸ್ತುತ ಮಂಗಳೂರಿನ ಪ್ರಸನ್ನ ಶೆಣೈ & ಕಂಪನಿ, ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯಲ್ಲಿ ಆರ್ಟಿಕಲ್ಶಿಪ್ ನಡೆಸುತ್ತಿದ್ದಾರೆ.
ಇವರು ಮಾಜಿ ಜಿ.ಪಂ.ಸದಸ್ಯರಾದ ಶಿವಾನಂದ ಹೆಗಡೆ ಕಡತೋಕ ಇವರ ಅಣ್ಣನಾದ ದಿ. ಸೂರ್ಯನಾರಾಯಣ ಹೆಗಡೆ ಮತ್ತು ಶ್ರಿಮತಿ ಸವಿತಾ ಹೆಗಡೆರವರ ಪುತ್ರರಾಗಿದ್ದಾರೆ.
ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಯಲ್ಲಿ ಓದಿದ ಪ್ರತಿಭಾವಂತ ವಿದ್ಯಾರ್ಥಿಯ ಅತ್ಯುನ್ನತ ಸಾಧನೆಗೆ ಸ್ಥಳೀಯ ಗ್ರಾ. ಪಂ. ಅಧ್ಯಕ್ಷರು, ಸದಸ್ಯರು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು, ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.