ಹೊನ್ನಾವರ: ಪಟ್ಟಣದ ಮಲ್ನಾಡ್ ಪ್ರೊಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಸಮೂಹ ಸಂಸ್ಥೆಯ ಅಡಿಯಲ್ಲಿ ಬರುವ ವಿದ್ಯಾಸಂಸ್ಥೆಗಳಲ್ಲಿ ಅಭ್ಯಸಿಸುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ನೀಡುವ ವಿದ್ಯಾಸಂಜೀವಿನಿ ಯೋಜನೆಗೆ ಪ್ರಾಯೋಗಿಕವಾಗಿ ಚಾಲನೆಯನ್ನು ನೀಡಲಾಯಿತು.
ಸೆಂಟ್ರಲ್ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟವನ್ನು ನೀಡುವ ಮೂಲಕ ಮಹತ್ವಾಕಾಂಕ್ಷಿ ಯೋಜನೆ ಪ್ರಾರಂಭವಾಯಿತು.
ಶುಚಿ ಮತ್ತು ರುಚಿಯ ಊಟವನ್ನು ವಿದ್ಯಾರ್ಥಿಗಳಿಗೆ ನೀಡುವ ಈ ಕಾರ್ಯವು ಮುಂದಿನ ದಿನಗಳಲ್ಲಿ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೂ ನೀಡುವ ಗುರಿಯನ್ನು ಹೊಂದಿದ್ದೇವೆ ಎಂದು ಎಂ.ಪಿ.ಇ.ಸೊಸೈಟಿಯ ಅಧ್ಯಕ್ಷ ಕೃಷ್ಣಮೂರ್ತಿ ಭಟ್, ಶಿವಾನಿ ತಿಳಿಸಿದರು.
ಸಮೂಹ ಸಂಸ್ಥೆಯಡಿಯಲ್ಲಿ ಬರುವ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಊಟವನ್ನು ನೀಡುವ ಸಲುವಾಗಿ ಸುಸಜ್ಜಿತವಾದ ಉಪಹಾರ ಗೃಹವನ್ನು ನಿರ್ಮಿಸಲಾಗಿದೆ.
ಈ ಸಂಸ್ಥೆಯಡಿಯಲ್ಲಿ ಕಲಿತ ಪೂರ್ವ ವಿದ್ಯಾರ್ಥಿಗಳು ಹಾಗೂ ಇತರೆ ದಾನಿಗಳ ಸಹಕಾರದಿಂದ ಈ ಯೋಜನೆ ಅನುಷ್ಠಾನಗೊಂಡಿದೆ. ಇದೇ ಎಂ.ಪಿ.ಇ.ಸೊಸೈಟಿಯ ಉಪಾಧ್ಯಕ್ಷ ನಾಗರಾಜ್ ಕಾಮತ್, ಕಾರ್ಯದರ್ಶಿ ಎಸ್.ಎಮ್.ಭಟ್, ಜಂಟಿಕಾರ್ಯದರ್ಶಿ ಜಿ.ಪಿ.ಹೆಗಡೆ, ನಿರ್ದೇಶಕ ಸುರೇಶ್ ಶೇಟ್, ಸೆಂಟ್ರಲ್ ಶಾಲೆಯ ಪ್ರಾಂಶುಪಾಲೆ ಡಾ.ವಿಜಯಲಕ್ಷ್ಮೀ ನಾಯ್ಕ, ಹಾಗೂ ಇನ್ನಿತರರು ಈ ವೇಳೆ ಹಾಜರಿದ್ದರು.