ಸಿದ್ದಾಪುರ: ಇ- ಆಡಳಿತವನ್ನು ಇನ್ನಷ್ಟು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಂದಾಯ ಸಚಿವ ಕೃಷ್ಣಬೈರೆಗೌಡ ಅವರ ಸೂಚನೆಯಂತೆ ಗ್ರಾಮ ಆಡಳಿತಾಧಿಕಾರಿಗಳಿಗೆ ಸರ್ಕಾರದಿಂದ ನೀಡಲಾಗುವ ಲ್ಯಾಪ್ ಟ್ಯಾಪ್‌ಗಳನ್ನು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ವಿತರಿಸಿದರು.
ಸೋಮವಾರ ತಾಲೂಕಾ ಆಡಳಿತ ಸೌಧದಲ್ಲಿ ಲ್ಯಾಪಟ್ಯಾಪ್ ವಿತರಿಸಿ ಕಂದಾಯ ಇಲಾಖೆಯಿಂದ ನೀಡಲಾಗುವ ದಾಖಲೆಗಳಿಗೆ ಇನ್ನು ಮುಂದೆ ಹೆಚ್ಚು ಸಮಯ ಕಳೆಯುವ ಅಗತ್ಯವಿಲ್ಲ. ಹಳೆಯ ದಾಖಲೆಗಳನ್ನು ಸಹ ಡಿಜಿಟಲೀಕರಣಗೊಳಿಸಲಾಗಿದೆ. ಈ ಮಹತ್ತರ ಕಾರ್ಯ ಯಶಸ್ವಿಯಾಗಿ ಅನುಷ್ಠಾನಗೊಳಿಸುವಲ್ಲಿ ಸೂಕ್ತ ನಿರ್ದೇಶನ ನೀಡಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಗ್ರಾಮ ಆಡಳಿತಾಧಿಕಾರಿಗಳು ತಮ್ಮ ಕಚೇರಿಗೆ ಬರುವ ರೈತರು ಹಾಗೂ ಇತರ ಸಾರ್ವಜನಿಕರಿಗೆ ತಕ್ಷಣ ದಾಖಲೆ ನೀಡುವ ಕೆಲಸವಾಗಬೇಕು ಎಂದು ಸೂಚಿಸಿದರು.
ಈ ವೇಳೆ ತಾಲೂಕಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ, ತಾಲೂಕಾ ದಂಡಾಧಿಕಾರಿ ಎಂ.ಆರ್.ಕುಲಕರ್ಣಿ ಹಾಗೂ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.