ಕಾರವಾರ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ, ಶಾಹಿನ್ ಚಂಡ ಮಾರುತದ ಪರಿಣಾಮ ಅ.7ರ ತನಕ ರಾಜ್ಯದ ಹಲವೆಡೆ ಮಳೆ ಮುಮದುವರೆಯಲಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಪ್ರಕಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕು ದಿನ ಮುಂದುವರೆಯಲಿದ್ದು, ಉತ್ತರ ಕನ್ನಡ ಸೇರಿ ಉಡುಪಿ, ದಕ್ಷಿಣ ಕನ್ನಡ ದಲ್ಲಿ ಇಂದಿನಿಂದ ಅಕ್ಟೋಬರ್ 7 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸೆದೆ. ಇನ್ನುಳಿದಂತೆ ಹಾಸನ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಶಿವಮೊಗ್ಗ, ಮಂಡ್ಯ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತ ಪರಿಚಲನೆಯು ಸಮುದ್ರ ಮಟ್ಟಕ್ಕಿಂತ 4.5 ಕಿ.ಮೀ ವರೆಗೂ ವಿಸ್ತರಿಸಿದೆ.