ಕುಮಟಾ : ತಾಲೂಕಿನ ಪ್ರಸಿದ್ಧ ಡಾ. ಜಾನು ಮಣಕಿಕರ್ ಮೆಟರನಿಟಿ ಮತ್ತು ನರ್ಸಿಂಗ್ ಹೋಂನಲ್ಲಿ ಗರ್ಭಿಣಿಯೊಬ್ಬಳು ತ್ರಿವಳಿ ಶಿಶುಗಳಿಗೆ ಜನ್ಮ ನೀಡಿದ್ದಾಳೆ. ಗೋಕರ್ಣದ ಗಂಗಾವಳಿ ನಿವಾಸಿ 24 ವರ್ಷದ ಹಲೀಮಾ ಸಾದಿಕ್ ಸಾಬ್ ತ್ರಿವಳಿ ಶಿಶುಗಳಿಗೆ ಜನ್ಮ ನೀಡಿದ್ದು ತಾಯಿ, ಮಕ್ಕಳು ಸುರಕ್ಷಿತವಾಗಿದ್ದಾರೆ.
ಇವರಿಗೆ 7ನೇ ತಿಂಗಳಿನಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿದೆ, ಕುಟುಂಬಸ್ಥರು ತಕ್ಷಣ ಜಾನು ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಗರ್ಭಿಣಿಯನ್ನು ಪರೀಕ್ಷಿಸಿದ ಡಾ ಪ್ರಶಾಂತ ಮಣಕಿಕರ್ ಅವರು ನಾರ್ಮಲ್ ಹೆರಿಗೆ ಮಾಡಿಸಲು ಮುಂದಾಗಿದ್ದಾರೆ. ಸುರಕ್ಷಿತ ಮತ್ತು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದರಿಂದ ಹಲೀಮಾ ಸಾದಿಕ್ ಸಾಬ್ ಅವರು ಎರಡು ಹೆಣ್ಣು ಮತ್ತು ಒಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಶಿಶುಗಳ ಆರೋಗ್ಯದ ಸುರಕ್ಷತಾ ದೃಷ್ಠಿಯಿಂದ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಶಿಶುಗಳನ್ನು ಮಣಿಪಾಲ ಆಸ್ಪತ್ರೆಯ ಶಿಶು ಸುರಕ್ಷತಾ ಕೇಂದ್ರದಲ್ಲಿ ಇರಿಸಲಾಗಿದೆ.