ಅಂಕೋಲಾ: ನಾಡವರ ಸಂಘ ಗಾಂಧಿನಿವಾಸ ಅಂಕೋಲಾ (ಉ.ಕ.)ದ 2020-21ನೇ ಸಾಲಿನ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದ್ದು, ಅ.20 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2020-21ನೇ ಸಾಲಿನ ಪ್ರತಿಭಾ ಪುರಸ್ಕಾರವನ್ನು ನಾಡವರ ಸಂಘ ಅಂಕೋಲಾದಿಂದ ಹಮ್ಮಿಕೊಂಡಿದ್ದು, ನಾಡವರ ಸಮಾಜದ ವಿದ್ಯಾರ್ಥಿಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.80, ದ್ವಿತೀಯ ಪಿಯುಸಿ ವಿಜ್ಞಾನದಲ್ಲಿ ಶೇ.85, ಕಲಾ ವಿಭಾಗದಲ್ಲಿ ಶೇ.55 ಹಾಗೂ ವಾಣಿಜ್ಯ ವಿಷಯದಲ್ಲಿ ಶೇ.65 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ಆಂಗ್ಲ ಮತ್ತು ಕನ್ನಡ ಮಾಧ್ಯಮದಲ್ಲಿ ತಲಾ 5, ಪಿಯುಸಿ ವಿಜ್ಞಾನ ವಿಭಾಗದಲ್ಲಿ 4 ಹಾಗೂ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ತಲಾ 3 ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು ಮತ್ತು 2020-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಚಿನ್ನದ ಪದಕ ಪಡೆದ, ಕ್ರೀಡೆಯಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಪ್ರಶಸ್ತಿಗಳಿಸಿದ ಯುಪಿಎಸ್‍ಸಿಯಲ್ಲಿ ಪಾಸಾದ ಪ್ರತಿಭಾವಂತರನ್ನು ಈ ಸಂದರ್ಭದಲ್ಲಿ ಗೌರವಿಸಲಾಗುವುದು.
ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 2020-21ನೇ ಶೈಕ್ಷಣಿಕ ವರ್ಷದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.70 ಅಥವಾ ಅದಕ್ಕಿಂತ ಹೆಚ್ಚು ಅಂಕಪಡೆದ ಆಂಗ್ಲ ಮತ್ತು ಕನ್ನಡ ಮಾಧ್ಯಮದಲ್ಲಿ ಅಂಕ ಪಡೆದ 5 ವಿದ್ಯಾರ್ಥಿಗಳಿಗೆ ತಲಾ ರೂ.5000/, ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಶೇ.75 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದ 4 ವಿದ್ಯಾರ್ಥಿಗಳಿಗೆ, ಕಲಾ ವಿಭಾಗದಲ್ಲಿ ಶೇ.50 ಅಥವಾ ಅದಕ್ಕಿಂತ ಹೆಚ್ಚು ಅಂಕಗಳಿಸಿದ 3 ವಿದ್ಯಾರ್ಥಿಗಳಿಗೆ, ವಾಣಿಜ್ಯ ವಿಭಾಗದಲ್ಲಿ ಶೇ.60 ಅಥವಾ ಅದಕ್ಕಿಂತ ಹೆಚ್ಚು ಅಂಕಗಳಿಸಿದ 3 ವಿದ್ಯಾರ್ಥಿಗಳಿಗೆ ತಲಾ 5000/ ರೂ.ರಂತೆ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಆಡಳಿತ ಮಂಡಳಿ ತೀರ್ಮಾನ ಅಂತಿಮವಾಗಿದ್ದು, ಅರ್ಹ ವಿದ್ಯಾರ್ಥಿಗಳನ್ನು ಅವರೇ ಆಯ್ಕೆ ಮಾಡುತ್ತಾರೆ. ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಜೇರಾಕ್ಸ್ ಅಂಕ ಪಟ್ಟಿಯೊಂದಿಗೆ, ಚಿನ್ನದ ಪದಕ ಪಡೆದ, ಕ್ರೀಡೆಯಲ್ಲಿ ರಾಜ್ಯ ಅಥವಾ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಶಸ್ತಿಗಳಿಸಿದ ಪ್ರತಿಭಾವಂತರು ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆಯನ್ನು ಸೂಕ್ತ ದಾಖಲೆಗಳೊಂದಿಗೆ ನೀಡಬೇಕು.
ಅರ್ಜಿ ಅಲ್ಲಿಸುವ ಅಬ್ಯರ್ಥಿಗಳು ಅಂಕಪಟ್ಟಿಯ ದೃಢೀಕೃತ ನಕಲು, ಆಧಾರ ಕಾರ್ಡ್ ನಕಲು, ಆದಾಯ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆಯನ್ನು ಸಲ್ಲಿಸಬೇಕು ಎಂದು ಅಧ್ಯಕ್ಷ ಆರ್.ಟಿ.ಮಿರಾಶಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.