ಕಾರವಾರ: ಬಂದರಿನ ಎರಡನೇ ಹಂತದ ಕಾಮಗಾರಿಗೆ ಸಂಬಂಧಿಸಿದಂತೆ ಮೀನುಗಾರರು ಹೈಕೋರ್ಟ್‍ನಲ್ಲಿ ಸಲ್ಲಿಸಿದ ಪಿಐಎಲ್ ವಿಚಾರಣೆ ನಡೆಸಿದ ನ್ಯಾಯಾಲಯವು ಸಿಎಫ್‍ಇ ಮಂಜೂರಾತಿಗೆ ಹೊಸದಾಗಿ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ಅಧ್ಯಕ್ಷ ಬಿಜೇಶ್ ಕುಮಾರ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೈತಖೋಲ್ ಎರಡನೇ ಹಂತದ ಬಂದರು ಅಭಿವೃದ್ಧಿ ಕಾಮಗಾರಿಯಿಂದ ಕಲಡತೀರಕ್ಕೆ ಧಕ್ಕೆಯಾಗುವುದರ ಜೊತೆಗೆ ಮೀನುಗಾರರು ನೆಲೆ ಕಳೆದುಕೊಳ್ಳುವ ಬಗ್ಗೆ ಮೀನುಗಾರರ ಹಾಗೂ ಸಾರ್ವಜನಿಕರು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ಅಧ್ಯಕ್ಷ ಬ್ರಿಜೇಶ್ ಕುಮಾರ್ ಬಳಿ ಯೋಜನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಂವಾದ ಸಭೆಯಲ್ಲಿ ಮೀನುಗಾರರು ಯೋಜನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಉತ್ತರ ಕನ್ನಡ ಜಿಲ್ಲಾ ಮೀನುಗಾರಿಕಾ ಫೇಡರೇಶನ್ ಅಧ್ಯಕ್ಷ ರಾಜು ತಾಂಡೇಲ್, ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ ಸೇರಿದಂತೆ ಇನ್ನಿತರರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.