ಅಂಕೋಲಾ: ತಾಲೂಕಿನ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಹರ್ಷಿತಾ ಎಸ್. ನಾಯಕ ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ.
ಕರ್ತವ್ಯಲೋಪದಡಿ ಅಮಾನತುಗೊಂಡ ಬಿಇಒ ಶ್ಯಾಮಲಾ ಟಿ. ನಾಯಕ ಅವರ ಸ್ಥಾನಕ್ಕೆ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹರ್ಷಿತಾ ಅವರನ್ನು ಸಾರ್ವಜನಿಕರ ಶಿಕ್ಷಣ ಇಲಾಖೆ ಧಾರವಾಡ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಎಸ್. ಹಿರೇಮಠ ಆದೇಶಿದ್ದಾರೆ.