ಹುಬ್ಬಳ್ಳಿ: ವಿದ್ಯಾರ್ಥಿಗಳಿಗೆ ಹೈಸ್ಕೂಲ್ನಿಂದಲೇ ತಾಂತ್ರಿಕ ಶಿಕ್ಷಣ ನೀಡಬೇಕು. ತಾಂತ್ರಿಕ ಶಿಕ್ಷಣ ಆಧರಿಸಿ ಶಿಕ್ಷಣ ನೀಡುವ ಶಾಲೆಗಳನ್ನು ಆರಂಭ ಮಾಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಬಿಯಾಂಡ್ ಬೆಂಗಳೂರು `ಇನ್ನೋವೇಷನ್ ಮತ್ತು ಇಂಪ್ಯಾಕ್ಟ್ ಹುಬ್ಬಳ್ಳಿ’ ಕಾರ್ಯಕ್ರಮವನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಮಾತನಾಡಿದರು.
ತಾಂತ್ರಿಕ ಶಿಕ್ಷಣದಿಂದ ವಿದ್ಯುತ್ಗಳಲ್ಲಿ ಗ್ರಹಿಕೆಯ ಶಕ್ತಿ ಹೆಚ್ಚುತ್ತದೆ. ಆದ್ದರಿಂದ ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕಿದೆ. ಪಾಲಿಟೆಕ್ನಿಕ್ ಕಾಲೇಜುಗಳನ್ನು ಉನ್ನತ ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಅಟಲ್ ಟಿಂಕರಿಂಗ್ ಲ್ಯಾಬ್ಗಳನ್ನು ಉನ್ನತ ದರ್ಜೆಗೆ ಏರಿಸುವ ಮೂಲಕ ಮಕ್ಕಳಲ್ಲಿ ಸಂಶೋಧನಾ ಮನೋಭಾವ ಹೆಚ್ಚಿಸಬೇಕು ಎಂದೂ ಅವರು ತಿಳಿಸಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಪ್ರತಿಭೆಗಳಿದ್ದಾರೆ. ಅವರಿಗೆ ಸರಿಯಾದ ಅವಕಾಶ ಕಲ್ಪಿಸಿಕೊಡುವ ಕೆಲಸವಾಗಬೇಕು. ಬೆಂಗಳೂರು, ಪುಣೆಯಲ್ಲಿನ ಐಟಿ ಬಿಟಿ ಕಂಪೆನಿಗಳಲ್ಲಿ ಉತ್ತರ ಕರ್ನಾಟಕದ ಹಲವು ಪ್ರತಿಭೆಗಳಿದ್ದಾರೆ ಎಂದು ಅವರು ಹೇಳಿದ್ದಾರೆ.