ಭಟ್ಕಳ: ಇತ್ತೀಚಿಗೆ ಭಟ್ಕಳ ತಾಲೂಕಿನಾದ್ಯಂತ ಅರಣ್ಯವಾಸಿಗಳಿಗೆ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಅ.7 ಗುರುವಾರ ಮಧ್ಯಾಹ್ನ 12 ಗಂಟೆಗೆ ಉಪ-ವಿಭಾಗಾಧಿಕಾರಿ ಮಮತಾ ದೇವಿ ಅವರೊಂದಿಗೆ ಹೋರಾಟಗಾರ ವೇದಿಕೆ ನಿಯೋಗವು ಚರ್ಚಿಸಲಿದೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತಹ ಅತಿಕ್ರಮಣದಾರರಿಗೆ ಕಾನೂನಿಗೆ ವ್ಯತಿರಿಕ್ತವಾಗಿ, ಕಾನೂನಿನ ವಿಧಿ-ವಿಧಾನ ಅನುಸರಿಸದೇ ಅರ್ಜಿ ತೀರಸ್ಕರಿಸುವ ಕುರಿತು ಹಾಗೂ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಮಂಜೂರಿ ಪ್ರಕ್ರೀಯೆ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.