ಶಿರಸಿ: ನಗರದ ಭೂಮಾ ಪ್ರೌಢ ಶಾಲೆಯಲ್ಲಿ ಶಿರಸಿ ತಾಲೂಕಾ ಮಟ್ಟದ ಪ್ರೌಢ ಮತ್ತು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ದಿವಾಕರ ಶೆಟ್ಟಿ, ಉಪನಿರ್ದೇಶಕರು ನೆರವೇರಿಸಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ಉಪೇಂದ್ರ ಪೈ, ದೈಹಿಕ ಶಿಕ್ಷಣ ಅಧಿಕಾರಿ ವಸಂತ ಭಂಡಾರಿ, ದೈ.ಹಿ. ಪರಿವೀಕ್ಷಕ ಮಂಜುನಾಥ ನಾಯ್ಕ ಭಾಗವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಎಸ್. ಹೆಗಡೆ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಾಗಾರದಲ್ಲಿ ಶಿಕ್ಷಕರಿಗೆ ಕಾನೂನಿನ ಕುರಿತು ಮಾಹಿತಿ ಮತ್ತು ಆರೋಗ್ಯ ಮತ್ತು ಸುರಕ್ಷತೆ ಮತ್ತು ಸ್ವಚ್ಛತೆ ವಿಷಯ ಕುರಿತು ಮಾಹಿತಿ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಭೀಮಾಶಂಕರ ಪೋಲಿಸ್ ಠಾಣಾಧಿಕಾರಿ ಮತ್ತು ಡಾ.ದಿನೇಶ ಹೆಗಡೆ ಭಾಗವಹಿಸಿದ್ದರು. ಕಾರ್ಯಾಗಾರದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ದೈಹಿಕ ಶಿಕ್ಷಣ ಶಿಕ್ಷಕರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ತಾಲೂಕಾ ಪ್ರೌಢ ಮತ್ತು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರಕ್ಕೆ ಧನ ಸಹಾಯ ನೀಡಿದ ದಾನಿಗಳನ್ನು ಸ್ಮರಿಸಿ ಕಾರ್ಯಕ್ರಮ ಸಂಪನ್ನಗೊಂಡಿತು.