ಚಿಕ್ಕಮಗಳೂರು: ವಿದ್ಯುತ್ ಟ್ರಾನ್ಸ್‍ಫಾರ್ಮರ್ ಹಾಳಾದರೆ 24 ತಾಸಿನೊಳಗೆ ಬದಲಾಯಿಸಬೇಕು. ಒಂದು ವೇಳೆ ಟ್ರಾನ್ಸ್ಫಾರ್ಮರ್ ಬದಲಾವಣೆಗೆ ರೈತರಿಂದ ಹಣಕ್ಕೆ ಬೇಡಿಕೆ ಇಟ್ಟ ನಿರ್ದಿಷ್ಟ ದೂರು ಬಂದರೆ 48 ತಾಸಿನೊಳಗೆ ಸಂಬಂಧಿಸಿದ ಅಧಿಕಾರಿಯನ್ನು ಅಮಾನತು ಮಾಡಲಾಗುವುದು ಎಂದು ಇಂಧನ ಸಚಿವ ವಿ.ಸುನೀಲ್‍ಕುಮಾರ್ ಅಧಿಕಾರಿಗಳಿಗೆ ಎಚ್ಚರಿಸಿದರು.
ನಗರದಲ್ಲಿ ಆಯೋಜಿಸಿದ್ದ ವಿದ್ಯುತ್ ಅದಾಲತ್‍ನಲ್ಲಿ ಸಾರ್ವಜನಿಕ ಸಮಸ್ಯೆ ಆಲಿಸಿ ಮಾತನಾಡಿದರು. ರೈತರಿಗೆ ಟಿಸಿ ಕೊಡುವಾಗ ಹೆಚ್ಚು ಹಣ ಕೇಳಲಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಮುಂದಿನ ದಿನಗಳಲ್ಲಿ ಇದಕ್ಕೆ ಅವಕಾಶ ನೀಡಬಾರದು. ಹೆಚ್ಚಿನ ಹಣ ಕೇಳಿದರೆ ಅಂತಹ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗುವುದು ಎಂದು ಸುನೀಲ್‍ಕುಮಾರ್ ಹೇಳಿದರು.