ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ‘ಇ-ಸ್ವತ್ತು’ ಮತ್ತು ನಗರ ಪ್ರದೇಶಗಳಲ್ಲಿ ಇ-ಖಾತಾ (FORM-3) ನೀಡುವ ಕುರಿತು ಪರಾಮರ್ಶಿಸಲು ಸಚಿವ ಸಂಪುಟದ ಉಪಸಮಿತಿ ರಚಿಸಿರುವ ಬಗ್ಗೆ ಪರಾಮರ್ಶಿಸಲು 7 ಸಚಿವರನ್ನೊಳಗೊಂಡ ಸಚಿವ ಸಂಪುಟದ ಒಂದು ಉಪಸಮಿತಿ ರಚನೆ ಮಾಡಿರುವುದಾಗಿ ಸರ್ಕಾರದ ಜಂಟಿ ಕಾರ್ಯದರ್ಶಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅಧ್ಯಕ್ಷರಾಗಿ, ಸದಸ್ಯರಾಗಿ ಕಂದಾಯ ಸಚಿವ ಆರ್.ಅಶೋಕ್, ಕಾನೂನು, ಸಂಸದೀಯ ವ್ಯವಹಾರ ಸಚಿವ ಜೆ.ಸಿ ಮಾಧುಸ್ವಾಮಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಪೌರಾಡಳಿತ ಸಚಿವ ಎನ್.ನಾಗರಾಜು, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರನ್ನು ಉಪಸಮಿತಿಗೆ ಆಯ್ಕೆ ಮಾಡಿದ್ದಾರೆ.