ಶಿರಸಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇವರ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆಯ ಅಂಗವಾಗಿ ರಸ್ತೆ ಸುರಕ್ಷತಾ ತರಬೇತಿ ಮತ್ತು ಪ್ರದರ್ಶನ ಚಟುವಟಿಕೆಯನ್ನು ವಿಶೇಷವಾಗಿ ನಗರದ ಲಯನ್ಸ್ ಶಾಲೆಯ ಸ್ಕೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಮುಖ್ಯ ಉದ್ಘಾಟಕರಾಗಿ ಪ್ರಾದೇಶಿಕ ರಸ್ತೆ ಸಾರಿಗೆ ಅಧಿಕಾರಿ ಸಿ. ಡಿ. ನಾಯ್ಕ ಇವರು ಆಗಮಿಸಿ ರಸ್ತೆ ಸುರಕ್ಷತಾ ಫಲಕದ ಉದ್ಘಾಟನೆ ಮಾಡಿದರು. ತದನಂದರ ಮಾತನಾಡಿದ ಸಿ. ಡಿ. ನಾಯ್ಕ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ, ವಾಹನ ನೊಂದಣಿ, ರಸ್ತೆ ಸಾರಿಗೆಯ ಸಂಕೇತಗಳ ಕುರಿತು ಮಾಹಿತಿ ನೀಡುವುದರೊಂದಿಗೆ, ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ನಿಯಮಗಳ ಅರಿವಿನ ಬಗ್ಗೆ ರಸಪ್ರಶ್ನೆ ಕೇಳಿದರು. ಇದಕ್ಕೆ ವಿದ್ಯಾರ್ಥಿಗಳು ಮಾರ್ಮಿಕವಾಗಿ ಉತ್ತರಿಸುತ್ತಾ ತಮ್ಮಲ್ಲಿದ್ದ ಸಂದೇಹಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸಿಕೊಂಡರು.
ಸ್ಕೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಬಂದ ಅಧಿಕಾರಿಗಳನ್ನು ಗೈಡ್ಸ್ ಕ್ಯಾಪ್ಟನ್ ಚೇತನಾ ಪಾವಸ್ಕರ್ ಇವರು ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್‍ನ ಕಾರ್ಯದರ್ಶಿ ಲಯನ್ ವಿನಯ ಹೆಗಡೆ ಆಗಮಿಸಿ ರಸ್ತೆಯ ಸುರಕ್ಷತೆಯ ಬಗ್ಗೆ ಹಲವು ಮಾಹಿತಿಗಳನ್ನು ನೀಡಿ ಮಕ್ಕಳಲ್ಲಿ ಅರಿವು ಮೂಡಿಸಿದರು. ಈ ಕಾರ್ಯಕ್ರಮದಲ್ಲಿ ಲಯನ್ ನಾಗರಾಜ ಹೆಗಡೆ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಶಾಲೆಯ ಮುಖ್ಯಾಧ್ಯಾಪಕ ಶಶಾಂಕ ಹೆಗಡೆ ವಹಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಸ್ಕೌಟ್ಸ್ ಮಾಸ್ಟರ್ ರಾಘವೇಂದ್ರ ಹೊಸೂರು ವಂದನೆಗೈದರು. ಶಾಲೆಯ ಸಹಶಿಕ್ಷಕಿ ವಿದ್ಯಾವತಿ ಭಟ್ ಕಾರ್ಯಕ್ರಮ ನಿರೂಪಿಸಿದರು.
ಈ ಎಲ್ಲಾ ಕಾರ್ಯಕ್ರಮದ ಮೊದಲು ಶಾಲೆಯ ಹಿರಿಯ ಶಿಕ್ಷಕಿ ಗೀತಾ ಹೆಗಡೆ ಇವರು ದೀಪ ಬೆಳಗಿಸುವುದರೊಂದಿಗೆ ಸ್ಕೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಈ ಕಾರ್ಯಕ್ರಮಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಸಂಘಟಕ ವಿರೇಶ ಮಾದರ್ ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್‍ನ ವಾಲೆಂಟಿಯರ್ ಜ್ಞಾನೇಶ ವೆರ್ಣೇಕರ ಉಪಸ್ಥಿತರಿದ್ದರು.