ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬುಧವಾರ ಸಂಜೆ ಭಾರೀ ಮಳೆ ಸುರಿದಿದೆ. ಎರಡು ಗಂಟೆಗಳ ಕಾಲ ಸುರಿದ ಮಳೆಗೆ ಚರಂಡಿಗಳು ತುಂಬಿ ರಸ್ತೆಗಳ ಮೇಲೆ ನೀರು ಹರಿಯುತ್ತಿದ್ದ ದೃಶ್ಯ ಕಂಡುಬಂದಿದೆ.
ಸಂಜೆ ವೇಳೆ ವಾಹನಗಳಿಂದ ತುಂಬಿರುತ್ತಿದ್ದ ರಸ್ತೆಗಳು ಖಾಲಿಯಾಗಿದ್ದವು. ಗ್ರಾಮೀಣ ಭಾಗದಲ್ಲಿಯೂ ಮಳೆಯಾಗಿದ್ದು, ಕೆಂಗ್ರೆ ಹೊಳೆ, ಶಾಲ್ಮಲಾ ನದಿ ಸೇರಿದಂತೆ ಎಲ್ಲ ಹಳ್ಳಕೊಳ್ಳ ಬಹುತೇಕ ಉಕ್ಕಿ ಹರಿದವು.
ಭಾಳೆ ಮಳೆ ಸುರಿದರೂ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಮಳೆ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ವಾರದಿಂದ ಕಡಿಮೆಯಾಗಿದ್ದ ಮಳೆ ಏಕಾಏಕಿ ಸುರಿದ ಪರಿಣಾಮ ನಾಗರಿಕರು ಕಿರಿಕಿರಿ ಅನುಭವಿಸಿದರು.