ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಸಿಪಿಐ ಎಸ್.ಎಸ್. ಸಿಮಾನಿ ಅವರ ನೇತೃತ್ವದಲ್ಲಿ ತಾಲೂಕಿನ ಸಹಕಾರಿ ಸಂಘದ ವ್ಯವಸ್ಥಾಪಕರು ಹಾಗೂ ಸೊಸೈಟಿಯ ಕೆಲ ಅಧ್ಯಕ್ಷರ ಜೊತೆ ಸಭೆ ನಡೆಸಿ ಮುನ್ನೆಚ್ಚರಿಕೆಯಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆÉಯಲ್ಲಿ ತಿಳಿಸಿದರು.
ಪೋಲಿಸ್ ಠಾಣೆಯಲ್ಲಿ ನಡೆದ ಸಭೆಯಲ್ಲಿ ಸಿಪಿಐ ಎಸ್.ಎಸ್. ಸಿಮಾನಿ ಮಾತನಾಡಿ, ತಾಲೂಕಿನ ಕೆಲವು ಕಡೆ ಅದರಲ್ಲ್ಲಿಯೂ ಸಂಘ-ಸಂಸ್ಥೆ, ಬ್ಯಾಂಕ್‍ಗಳಲ್ಲಿ ಕಳ್ಳರು ಕಳ್ಳತನ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಮುನ್ನೆಚ್ಚರಿಕೆಯಾಗಿ ತಮ್ಮ ಸೊಸೈಟಿ ಹಾಗೂ ಬ್ಯಾಂಕ್‍ಗಳಲ್ಲಿ ಕಡ್ಡಾಯವಾಗಿ ಸಿ.ಸಿ ಕ್ಯಾಮೆರಾಗಳನ್ನು ಹಾಗೂ ರಾತ್ರಿ ವೇಳೆಯಲ್ಲಿ ವಾಚಮ್ಯಾನ್‍ರನ್ನು ನೇಮಿಸಿಕೊಳ್ಳಬೇಕೆಂದು ಸೂಚಿಸಿದರು. ಇದಕ್ಕೆ ಸಹಕಾರಿ ಸಂಘದ ವ್ಯವಸ್ಥಾಪಕರು ಹಾಗೂ ಅಧ್ಯಕ್ಷರುಗಳು ಸಮ್ಮತಿಸಿ ಇಲಾಖೆಗೆ ಸಹಕಾರ ನೀಡುವುದಾಗಿ ತಿಳಿಸಿದರು.
ಬಸವರಾಜ ಮಬನೂರ ಹಾಗೂ ತಾಲೂಕಿನ ಸಹಕಾರಿ ಸಂಘದ ವ್ಯವಸ್ಥಾಪಕರು ಹಾಗೂ ಸೊಸೈಟಿಯ ಅಧ್ಯಕ್ಷರುಗಳು ಮತ್ತು ಪೊಲೀಸ ಸಿಬ್ಬಂದಿಗಳು ಉಪಸ್ಥಿತರಿದ್ದರು.