ಬೆಂಗಳೂರು: ಆಧಾರ್ ಅಕ್ರಮಗಳಿಂದ ರಾಷ್ಟ್ರೀಯ ಭದ್ರತೆಗೆ ಅಪಾಯವಿದೆ. ಈ ಬಗ್ಗೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಎಚ್ಚರ ವಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ತಿಳಿಸಿದೆ.
ಆಧಾರ್ ನೋಂದಣಿ ಸಂದರ್ಭದಲ್ಲಿ ನಡೆಯುವ ಅಕ್ರಮಗಳು ರಾಷ್ಟ್ರೀಯ ಭದ್ರತೆಗೆ ಒದಗುವ ಅಪಾಯವಾಗಿದೆ. ಇಂತಹ ಕೃತ್ಯಗಳ ಬಗ್ಗೆ ಸರ್ಕಾರಗಳು ಎಚ್ಚರಿಕೆ ವಹಿಸುವ ಅಗತ್ಯ ಇದೆ ಎಂದು ಹೇಳಿದ್ದಾರೆ. ಆಧಾರ್ ಕಿಟ್‍ಗಳ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಕರಣವೊಂದರ ವಿಚಾರಣೆ ನಡೆಸುವ ಸಂದರ್ಭದಲ್ಲಿ ಕೋರ್ಟ್ ಈ ವಿಚಾರವನ್ನು ತಿಳಿಸಿದೆ.
ನೆರೆ ರಾಷ್ಟ್ರಗಳ ಪ್ರಜೆಗಳಿಗೂ ಮನಬಂದಂತೆ ಆಧಾರ್ ಕಾರ್ಡ್ ವಿಚರಣೆ ನಡೆದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಗಳು ಆಧಾರ್ ಅಕ್ರಮಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದೆ. ಹಾಗೆಯೇ ಈ ಸಂಬಂಧ ದಾಖಲಾಗಿರುವ ಪ್ರಕರಣದ ಎಫ್‍ಐಆರ್ ರದ್ದು ಮಾಡದೆ, ಸಮಗ್ರ ತನಿಖೆ ನಡೆಸುವಂತೆಯೂ ಕೋರ್ಟ್ ಅಧಿಕಾರಿಗಳಿಗೆ ಸೂಚಿಸಿದೆ.