• first
    second
    third
    previous arrow
    next arrow
  • ದೇವಸ್ಥಾನದ ಮೇಲೆ ತೆಂಗಿನ ಮರ ಬಿದ್ದು ಹಾನಿ

    300x250 AD

    ಯಲ್ಲಾಪುರ: ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಭಾರಿ ಮಳೆ ಹಲವೆಡೆ ಅವಾಂತರ ಸೃಷ್ಟಿಸಿದೆ. ಮಳೆ- ಗಾಳಿಯ ಪರಿಣಾಮ ಉಮ್ಮಚಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟೆಮನೆಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಮೇಲೆ ತೆಂಗಿನ ಮರ ಮುರಿದು ಬಿದ್ದು ಹಾನಿಯಾಗಿದೆ.

    300x250 AD


    ಸುಮಾರು 300 ವರ್ಷಗಳ ಇತಿಹಾಸ ಇರುವ ಶ್ರೀ ಸಿದ್ದಿ ವಿನಾಯಕ ದೇವಸ್ಥಾನದ ಹೆಂಚು ಹಾಗೂ ಮೇಲ್ಛಾವಣಿಗೆ ಹಾನಿ ಉಂಟಾಗಿದ್ದು, ಗೋಡೆಯೂ ಒಡೆದಿದೆ. ಸ್ಥಳಕ್ಕೆ ಗ್ರಾ.ಪಂ. ಸದಸ್ಯ ಗ.ರಾ. ಭಟ್ಟ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಹಾನಿ ಪರಿಸೀಲಿಸಿದ್ದಾರೆ. ಗ್ರಾಮಸ್ಥರೇ ಶ್ರಮದಾನದ ಮೂಲಕ ದೇವಸ್ಥಾನದ ಮೇಲ್ಛಾವಣಿಯನ್ನು ಸರಿಪಡಿಸಿದರು.

    Share This
    300x250 AD
    300x250 AD
    300x250 AD
    Back to top