• Slide
    Slide
    Slide
    previous arrow
    next arrow
  • ಅಭಿವೃದ್ಧಿ ಕೆಲಸದಿಂದಲೇ ಬಿಜೆಪಿಯ ಮುಂದಿನ ಗೆಲುವು; ಗಿರೀಶ ಪಟೇಲ

    300x250 AD

    ಯಲ್ಲಾಪುರ: ಮುಂಬರುವ ಸ್ಥಳೀಯ ಚುನಾವಣೆಯಿಂದ ಹಿಡಿದು ಲೋಕಸಭೆಯವರೆಗಿನ ಎಲ್ಲಾ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಿ, ಗೆಲುವು ಸಾಧಿಸಲು ಪಕ್ಷವನ್ನು ಬಲಗೊಳಿಸಲಾಗುವುದು ಎಂದು ಬಿಜೆಪಿಯ ವಿಭಾಗದ ಪ್ರಭಾರಿ ಗಿರೀಶ ಪಟೇಲ ಹೇಳಿದರು.


    ಅವರು ಪಟ್ಟಣದ ಅಡಕೆ ಭವನದಲ್ಲಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಚುನಾಯಿತ ಪ್ರತಿನಿಧಿಗಳ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಪೂರ್ವ ಸಿದ್ಧತಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ರಾಜ್ಯ ಹಾಗೂ ಕೇಂದ್ರದಲ್ಲಿ ಉತ್ತಮ ಆಡಳಿತ ನೀಡುತ್ತಿದೆ. ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಮುಂಬರುವ ಚುನಾವಣೆಗಳನ್ನು ಪಕ್ಷ ಗೆಲ್ಲಲಿದೆ ಎಂದ ಅವರು, ಮೋದಿ ಜನ್ಮದಿನದ ಪ್ರಯುಕ್ತ ವಿಧಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪಕ್ಷ ಮಾದರಿಯಾಗಿದೆ ಎಂದರು.

    300x250 AD


    ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ ಸುರಾಣಾ, ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯ್ಕ, ವಾ.ಕ.ರ.ಸಾ ನಿಗಮದ ಅಧ್ಯಕ್ಷ ವಿ.ಎಸ್.ಪಾಟೀಲ, ಶಾಸಕರಾದ ದಿನಕರ ಶೆಟ್ಟಿ, ಸುನೀಲ ನಾಯ್ಕ, ಮಾಜಿ ಶಾಸಕ ಸುನೀಲ ಹೆಗಡೆ, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ.ನಾಯ್ಕ, ಪ್ರಮುಖರಾದ ಗಿರೀಶ ಪಟೇಲ, ಭಾರತಿ ಜಂಬಲಗಿ, ಗೋವಿಂದ ನಾಯ್ಕ ಇತರರಿದ್ದರು

    Share This
    300x250 AD
    300x250 AD
    300x250 AD
    Leaderboard Ad
    Back to top