Slide
Slide
Slide
previous arrow
next arrow

ನವರಾತ್ರಿ ನಾಲ್ಕನೇ ದಿನ ಕೂಷ್ಮಾಂಡ ದೇವಿ ಪೂಜೆ

300x250 AD

ನವರಾತ್ರಿ ವಿಶೇಷ: ನವರಾತ್ರಿಯ ಒಂಭತ್ತು ದಿನಗಳು ದೇವಿಯ ಒಂಭತ್ತು ಸ್ವರೂಪಗಳ ಆರಾಧನೆಯಾಗಿರುತ್ತದೆ. ದೇವಿಯ ಪ್ರತಿಯೊಂದು ಸ್ವರೂಪದ ಆರಾಧನೆಯಿಂದ ವಿಶಿಷ್ಟ ಫಲಗಳನ್ನು ಪಡೆಯಬಹುದಾಗಿದೆ. ದೇವಿಯ ಸ್ವರೂಪಗಳನ್ನು ಅತ್ಯಂತ ಶ್ರದ್ಧೆಯಿಂದ ಆರಾಧಿಸಿದರೆ ಸಕಲ ಇಷ್ಟಾರ್ಥಗಳು ಸಿದ್ಧಿಸುತ್ತವೆ. ಹಾಗಾಗಿ ದೇವಿಯ ಒಂಭತ್ತು ಸ್ವರೂಪಗಳಲ್ಲಿ ನಾಲ್ವನೇಯದಾದ ಕೂಷ್ಮಾಂಡ ದೇವಿ ಅವತಾರದ ಬಗ್ಗೆ ತಿಳಿಯೋಣ.


ನವರಾತ್ರಿಯ ನಾಲ್ಕನೇ ದಿನ ಕೂಷ್ಮಾಂಡ ದೇವಿ ಆರಾಧನೆ: ನವದುರ್ಗೆಯರಲ್ಲಿ ಕೂಷ್ಮಾಂಡ ದೇವಿ ನಾಲ್ಕನೆಯವಳು, ಈಕೆ ತನ್ನ ಮಧುರ ನಗುವಿನಿಂದ ಬ್ರಹ್ಮಾಂಡವನ್ನು ರಚಿಸಿದ ಕಾರಣ ಇವಳನ್ನು ಕೂಷ್ಮಾಂಡ ದೇವಿ ಎನ್ನಲಾಗುತ್ತದೆ. ಇವಳು ಆದಿಶಕ್ತಿಯ ಪ್ರತಿರೂಪ, ಕೂಷ್ಮಾಂಡ ದೇವಿಯ ರೂಪ ವಿಶೇಷವಾಗಿ ಗಮನ ಸೆಳೆಯುತ್ತದೆ, ಇವಳು ಸಿಂಹವಾಹನೆಯಾಗಿದ್ದು, ತೇಜೋಮಯಿಯಾಗಿದ್ದಾಳೆ. ಇವಳಿಗೆ ಎಂಟು ಕೈಗಳು ತನ್ನ ಕೈಗಳಲ್ಲಿ ಕಮಂಡಲ, ಧನಸ್ಸು, ಬಾಣ, ಕಮಲ, ಅಮೃತ ತುಂಬಿದ ಕಲಶ, ಚಕ್ರ, ಗದೆ ಹಿಡಿದಿದ್ದಾಳೆ. ವಿಶೇಷ ಎಂದರೆ ಕೂಷ್ಮಾಂಡ ದೇವಿಯ ಪ್ರಭೆಯ ಕಾಂತಿ ಸೂರ್ಯನಿಗೆ ಸಮಾನಾಗಿರುತ್ತದೆ.

300x250 AD

ನವರಾತ್ರಿಯ ನಾಲ್ಕನೇ ದಿನ ಕೂಷ್ಮಾಂಡ ದೇವಿಯನ್ನು ಪೂಜಿಸಲಾಗುತ್ತದೆ. ಸಂಸ್ಕೃತದಲ್ಲಿ ಕುಂಬಳಕಾಯಿಯನ್ನು ಕೂಷ್ಮಾಂಡ ಎನ್ನಲಾಗುತ್ತದೆ. ಈ ದೇವಿಗೆ ಕುಂಬಳಕಾಯಿ ಅತ್ಯಂತ ಪ್ರಿಯ. ಈಕೆಯನ್ನು ಶ್ರದ್ಧೆಯಿಂದ ಪೂಜಿಸಿದರೆ ಕಷ್ಟ ಪರಿಹರಿಸುತ್ತಾಳೆ ಭಕ್ತರ ಅಜ್ಞಾನವನ್ನು ದೂರ ಮಾಡುತ್ತಾಳೆ. ಕೂಷ್ಮಾಂಡ ದೇವಿಯ ಆರಾಧನೆಯ ಪೂಜಾ ಫಲಗಳು ಅತ್ಯಂತ ವಿಶೇಷ…..

ಈಕೆಯ ಆರಾಧನೆಯಿಂದ ರೋಗಗಳಿಂದ ಮುಕ್ತಿ ಪಡೆಯಬಹುದು. ಇವಳು ಭಕ್ತರ ದುಃಖ ದೂರ ಮಾಡುತ್ತಾಳೆ. ಆಯಸ್ಸು, ಆರೋಗ್ಯ ವೃದ್ಧಿಯಾಗುತ್ತದೆ, ಜೀವನದಲ್ಲಿ ಯಶಸ್ಸು ಪ್ರಾಪ್ತಿಯಾಗುತ್ತದೆ. ನವರಾತ್ರಿಯ ನಾಲ್ಕನೇ ದಿನ ಸಾಧಕರು ಕೂಷ್ಮಾಂಡ ದೇವಿಯ ಆರಾಧನೆ ಮಾಡುತ್ತಾರೆ. ಈ ದಿನ ಸಾಧಕನ ಮನಸ್ಸು ಅನಾಹತ ಚಕ್ರದಲ್ಲಿ ನೆಲೆನಿಲ್ಲುತ್ತದೆ. ಈ ದೇವಿಯ ಆರಾಧನೆಯಿಂದ ಮನಸ್ಸು ಏಕಾಗ್ರತೆಗೆ ಸಾಧಿಸುತ್ತದೆ.

Share This
300x250 AD
300x250 AD
300x250 AD
Back to top